ಕೆಂಗಲ್ ಯೋಜನಾ ವ್ಯಾಪ್ತಿಯ ಕೂನಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನ ಕಾರ್ಯಕ್ರಮ ನಡೆಸಲಾಯಿತು ಕಾರ್ಯಕ್ರಮದಲ್ಲಿ ವೈದ್ಯರಾದ ಶ್ರೀಮತಿ ಪುಣ್ಯವತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಾದಕ ವಸ್ತುವಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ವಿಭೂತಿಕೆರೆ ಶಿವಲಿಂಗಯ್ಯ, ಕೈಲಾಂಚ ವಲಯ ಮೇಲ್ವಿಚಾರಕರಾದ ಪ್ರವೀಣ್ ಕುಮಾರ್, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
