ಕೆ.ಜಿ.ಎಫ್ ನಲ್ಲಿ 1837 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕ್ಯಾಸಂಬಳ್ಳಿ ಕೆ.ಜಿ.ಎಫ್ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕೆ.ಜಿ.ಎಫ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿ.ಸಿ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಬಿ.ಸಿ ಟ್ರಸ್ಟ್ (ರಿ.) ಕೋಲಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನಗಳೊಂದಿಗೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕ್ಯಾಸಂಬಳ್ಳಿ ವಲಯ, ನವಜೀವನ ಸಮಿತಿಗಳು ಕೆ.ಜಿ.ಎಫ್ ತಾಲೂಕು, ಸ್ಥಳೀಯ ಸಂಘ-ಸಂಸ್ಥೆಗಳ ದಾನಿಗಳ ಸಹಕಾರದೊಂದಿಗೆ 1837 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಕ್ಯಾಸಂಬಳ್ಳಿಯ ಕೆ ವಿ ಆರ್ ಕಲ್ಯಾಣ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರವಿ ರೆಡ್ಡಿ ಅಧ್ಯಕ್ಷರು 1837 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕ್ಯಾಸಂಬಳ್ಳಿ ಹಾಗೂ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಸುನಿತ ಆನಂದ ರೆಡ್ಡಿ ಅಧ್ಯಕ್ಷರು ಗ್ರಾಮ ಪಂಚಾಯತಿ ಕ್ಯಾಸಂಬಳ್ಳಿ ಇವರು ನೆರವೇರಿಸಿದರು. ಶ್ರೀ ತಿಮ್ಮಯ್ಯ ನಾಯ್ಕ್ ಪ್ರಾದೇಶಿಕ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ನಡೆದು ಬಂದ ಹಾದಿ, ಅಭಿವೃದ್ಧಿಯ ಕಾರ್ಯಕ್ರಮ, ಜನಜಾಗೃತಿ ವೇದಿಕೆ ಆರಂಭ, ಜನಜಾಗೃತಿ ವೇದಿಕೆ ಮೂಲಕ ನಡೆಯುವ ಮದ್ಯವರ್ಜನ ಶಿಬಿರ ಹಾಗೂ ಪಾನಮುಕ್ತರ ಸಂಘಟನೆ ಕುರಿತು ವಿಸ್ತರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಪದ್ಮಯ್ಯ ಸಿ. ಹೆಚ್. ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕೋಲಾರ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮದ್ಯಪಾನವೆಂಬುದೊಂದು ಸಮಾಜವನ್ನು ಬಾದಿಸುವ ಮತ್ತು ಜಾಗೃತೆ ತಪ್ಪಿದರೆ ಯಾರನ್ನೂ ಬಿಡದ ಖಾಯಿಲೆ. ಮದ್ಯಪಾನಕ್ಕೆ ಜಾತಿ, ಧರ್ಮ, ಪಕ್ಷ, ಭೇದ ಯಾವುದೂ ಇರುವುದಿಲ್ಲ. ಹಾಗಾಗಿ ಇದೊಂದು ಸರ್ವಧರ್ಮ ಕಾರ್ಯಕ್ರಮ ಜೊತೆಗೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ, ವಾತ್ಸಲ್ಯ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನ ಮೆಚ್ಚುಗೆಯೊಂದಿಗೆ ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಶ್ರೀ ವೆಂಕಟಕೃಷ್ಣ ರೆಡ್ಡಿ ಗೌರವಾಧ್ಯಕ್ಷರು 1837 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕ್ಯಾಸಂಬಳ್ಳಿ ಇವರು ಪೂಜ್ಯರ ಕಾರ್ಯಕ್ರಮವನ್ನು ಶ್ಲಾಘಿಸಿ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಡಾ. ಸೌಜನ್ಯ ಎಂ. ಎನ್. ಆರೋಗ್ಯ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಸಂಬಳ್ಳಿ, ಶ್ರೀ ಡಿ. ಎನ್. ಪ್ರಕಾಶ್ ರೆಡ್ಡಿ ನಿರ್ದೇಶಕರು ಎ.ಪಿ.ಎಂ.ಸಿ ಕೆ.ಜಿ.ಎಫ್ ತಾಲೂಕು, ಶ್ರೀ ಆನಂದ ಕೆ. ವಿ. ಮಾಲೀಕರು ಕೆ ವಿ ಆರ್ ಕಲ್ಯಾಣ ಮಂಟಪ ಕ್ಯಾಸಂಬಳ್ಳಿ, ಶ್ರೀಮತಿ ಸುಲೋಚನ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ, ಶ್ರೀಮತಿ ಮಂಗಮ್ಮ ಸದಸ್ಯರು ಗ್ರಾಮ ಪಂಚಾಯಿತಿ ಬಿಲ್ಲೆರಹಳ್ಳಿ ಹಾಗೂ ಒಕ್ಕೂಟದ ಅಧ್ಯಕ್ಷರು, ಶ್ರೀ ಮಾದೇವ್ ನಾಯ್ಕ್ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕೆ.ಜಿ.ಎಫ್ ತಾಲೂಕು ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಮತ್ತು ಶ್ರೀಮತಿ ಫಿಲೋಮಿನಾ ಡಿಸೋಜ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಉಪಸ್ಥಿತರಿದ್ದರು. ಶ್ರೀ ಮಂಜುನಾಥ ಪಿ. ಜೊತೆ ಕಾರ್ಯದರ್ಶಿ/ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕ್ಯಾಸಂಬಳ್ಳಿ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರು ಮತ್ತು ನವಜೀವನ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.