ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಕೊಪ್ಪ ಯೋಜನಾ ಕಛೇರಿ ವ್ಯಾಪ್ತಿಯ ಹರಿಹರಪುರ ವಲಯದ ಕುಂಚುರು ಶ್ರೀ ದುರ್ಗಾ ಪರಮೇಶ್ವರಿ ಸಮುದಾಯ ಭವನದಲ್ಲಿ 1799ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಕೆ. ಆರ್. ಶ್ರೀನಿವಾಸ ಗೌಡ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು 1799ನೇ ಮದ್ಯವರ್ಜನ ಶಿಬಿರದ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಭಟ್ ಎಚ್. ಎಸ್. ರವರು ವಹಿಸಿದ್ದರು. ಮುಖ್ಯ ಅತಿಥಿಗಳಾದ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಸದಾನಂದ ಬಂಗೇರ ರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶಿಬಿರದ ಆಶಯದ ಬಗ್ಗೆ ಹಾಗೂ ಪ್ರಯೋಜನಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ಶ್ರೀ ನಾಗರಾಜ್ ಕುಲಾಲ್ ರವರು ಶಿಬಿರಾರ್ಥಿಗಳಿಗೆ ಕಾರ್ಯ ವೈಖರಿಯ ದಿನಚರಿ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ನಿರಂಜನ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಚಂದ್ರಪ್ಪ, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಅರವಿಂದ ಸೋಮಯಾಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕಾಂತ ದೇವಪ್ಪ, ಚಿಕ್ಕಮಗಳೂರು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರು, ತಾಲೂಕಿನ ಎಲ್ಲ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಶಿಬಿರಾಧಿಕಾರಿ ಶ್ರೀಯುತ ಕುಮಾರ್ ಹಾಗೂ ಆರೋಗ್ಯ ಸಹಾಯಕಿ ಶ್ರೀಮತಿ ಸೌಮ್ಯ, ಸೇವಾ ಪ್ರತಿನಿಧಿಗಳು, ನವಜೀವನ ಸದಸ್ಯರು, ವಿಪತ್ತು ನಿರ್ವಹಣಾ ಘಟಕ ಸದಸ್ಯರು, ಒಕ್ಕೂಟ ಪದಾಧಿಕಾರಿಗಳು, ದುರ್ಗಾ ಪರಮೇಶ್ವರಿ ದೇವಸ್ಥಾನ ಸಮಿತಿಯ ಸದಸ್ಯರುಗಳು, 1799ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
