ಕೊಪ್ಪಳ ಪ್ರಾದೇಶಿಕ ವಿಭಾಗದ ಹೂವಿನಹಡಗಲಿಯಲ್ಲಿ 1779ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹೂವಿನಹಡಗಲಿ, 1779ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹೂವಿನಹಡಗಲಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹೂವಿನಹಡಗಲಿ ತಾಲೂಕು, ಆರೋಗ್ಯ ಇಲಾಖೆ ಹೂವಿನಹಡಗಲಿ, ಕಿರಾಣಿ ವರ್ತಕರ ಸಂಘ ಹೂವಿನಹಡಗಲಿ, ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ ಹೂವಿನಹಡಗಲಿ, ಉದಯ ರವಿ ಚಾರಿಟೇಬಲ್ ಟ್ರಸ್ಟ್ ಹೂವಿನಹಡಗಲಿ, ಭಾವಸಾರ ಕ್ಷತ್ರಿಯ ಸಮಾಜ ಹೂವಿನಹಡಗಲಿ, ಸವಿತಾ ಸಮಾಜ ಹೂವಿನಹಡಗಲಿ, ಕಾರ್ಯನಿರತ ಪತ್ರಕರ್ತರ ಸಂಘ ಹೂವಿನಹಡಗಲಿ, ಹಾಲು ಉತ್ಪಾದಕರ ಸಹಕಾರಿ ಸಂಘ ಹೂವಿನಹಡಗಲಿ, ಜೈನ್ ಮಿಲನ್ ಹೂವಿನಹಡಗಲಿ ಶಾಖೆ, ಆರಕ್ಷಕ ಠಾಣೆ ಹೂವಿನಹಡಗಲಿ, ಜೈನ್ ಸಮಾಜ ಹೂವಿನಹಡಗಲಿ, ಕರ್ನಾಟಕ ಕಾರ್ಯನಿರತ ಪ್ರತಿಧ್ವನಿ ಹೂವಿನಹಡಗಲಿ, ಪ್ರಗತಿಬಂಧು ಜ್ಞಾನ ವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಹೂವಿನಹಡಗಲಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾll ಹೇಮಾವತಿ ವಿ. ಹೆಗ್ಗಡೆಯವರು ಇವರುಗಳ ಶುಭಾಶೀರ್ವಾದಗಳೊಂದಿಗೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರುಗುವ 1779ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ಹಿರಿಶಾಂತವೀರ ಸಮುದಾಯ ಭವನ ಹೂವಿನಹಡಗಲಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಡಾ. ಬಿ. ಶಿವಕುಮಾರ್ ವೈದ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆ ಹೂವಿನಹಡಗಲಿ ಇವರು ನೆರವೇರಿಸಿ ಉದ್ಘಾಟಕರ ಮಾತಗಳನ್ನಾಡಿದರು. ಶ್ರೀ. ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳು ವಿರಕ್ತಮಠ ಹಿರೇಮಲ್ಲನಕೆರೆ ಇವರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನವನ್ನು ನೀಡಿದರು. ಶ್ರೀ ನಟರಾಜ್ ಬಾದಾಮಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ವಿಜಯನಗರ ಜಿಲ್ಲೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ಶುಭವನ್ನು ಕೋರಿದರು. ಶ್ರೀ ನಾಗೇಶ್ ವೈ.ಎ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಪ್ಪಳ ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.