ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಗದಗ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಹುಣಸಿಕಟ್ಟಿ, ನಿರ್ದೇಶಕರಾದ ಶ್ರೀ ಯೋಗೀಶ್ ಎ., ಶ್ರೀ ಶಿವಪ್ರಕಾಶ್ ಮಹಾಜನ್ ಶೆಟ್ಟರ್, ಶ್ರೀ ಹೆಚ್. ಬಿ. ಅಸೂಟಿ ರವರ ಉಪಸ್ಥಿತಿಯಲ್ಲಿ ನಡೆಸಲಾಯಿತು. 2023/2024ನೇ ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ, 2024/25ನೇ ವರದಿ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಕ್ರಿಯಾಯೋಜನೆಯ ತಾಲೂಕುವಾರು ಹಂಚಿಕೆಯ ವಿಮರ್ಶೆ, ಜಿಲ್ಲಾ ಜನಜಾಗೃತಿ ಖಾತೆ ಬದಲಾವಣೆಯ ಬಗ್ಗೆ, 2024/25ರ ಮೊದಲ ತ್ರೈಮಾಸಿಕ ಅವಧಿಯ ಮಧ್ಯವರ್ಜನ ಶಿಬಿರದ ಬಗ್ಗೆ, ತಂಬಾಕು ಮತ್ತು ಮಾದಕ ವಸ್ತು ವಿರೋಧಿ ದಿನಾಚರಣೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವಜೀವನೋತ್ಸವ ಕಾರ್ಯಕ್ರಮ, ಆರೋಗ್ಯ ರಕ್ಷಾ ಕಾರ್ಯಕ್ರಮ, ಜನಜಾಗೃತಿ ಪದಾಧಿಕಾರಿಗಳ ಹೊಸ ಆಯ್ಕೆ ಬಗ್ಗೆ, ಮದ್ಯಮುಕ್ತ ಚುನಾವಣೆ ಮತ್ತು ಕರಪತ್ರ ಬಿಡುಗಡೆ, ನವಜೀವನ ಪೋಷಕರ ತರಬೇತಿ ಮತ್ತು ಸ್ವಾಸ್ಥ್ಯ ಸಂಕಲ್ಪ ತರಬೇತಿದಾರರ ತರಬೇತಿ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು.