ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ಸಂದಿಮನಿ ,ಉಪಾಧ್ಯಕ್ಷರಾದ ಶ್ರೀ ವೆಂಕಪ್ಪ ಮುಳ್ಳೂರ್, ನಿರ್ದೇಶಕರಾದ
ಶ್ರೀ ಕೃಷ್ಣ ಟಿ. ರವರ ಉಪಸ್ಥಿತಿಯಲ್ಲಿ ನಡೆಯಿತು. 2023-24 ನೇ ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ, 2024-25 ನೇ ವರದಿ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಕ್ರಿಯಾಯೋಜನೆಯ ತಾಲೂಕುವಾರು ಹಂಚಿಕೆಯ ವಿಮರ್ಶೆ, ಜಿಲ್ಲಾ ಜನಜಾಗೃತಿಯ ಖಾತೆ ಬದಲಾವಣೆ, 2024- 25 ನೇ ಮೊದಲ ತ್ರೈಮಾಸಿಕ ಅವಧಿಯ ಮಧ್ಯವರ್ಜನ ಶಿಬಿರ, ತಂಬಾಕು ಮತ್ತು ಮಾದಕ ವಸ್ತು ವಿರೋಧಿ ದಿನಾಚರಣೆ, ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ,
ನವ ಜೀವನೋತ್ಸವ ಕಾರ್ಯಕ್ರಮ, ಆರೋಗ್ಯ ರಕ್ಷಾ ಕಾರ್ಯಕ್ರಮ, ಜನಜಾಗೃತಿ ಪದಾಧಿಕಾರಿಗಳ ಹೊಸ ಆಯ್ಕೆ, ನವಜೀವನ ಪೋಷಕರ ತರಬೇತಿ, ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿಗಳು
ಉಪಸ್ಥಿತರಿದ್ದರು.
