ಕೊಪ್ಪಳ ಪ್ರಾದೇಶಿಕ ವಿಭಾಗದ ಕೊಪ್ಪಳ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಕೊಪ್ಪಳ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ವೇದಿಕೆಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಗುಪ್ತಾ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸದಾನಂದ ಬಂಗೇರ, ಉಪಾಧ್ಯಕ್ಷರಾದ ವೀರೇಶ್ ಬಂಗಾರ ಶೆಟ್ರು ಹಾಗೂ ನೀಲಕಂಠಪ್ಪ ನಾಗಶೆಟ್ಟಿ, ನಿಯೋಜಿತ ಅಧ್ಯಕ್ಷರಾದ ಶ್ರೀ ಜನಾರ್ದನ್ ಹುಲಿಗಿ, ಶ್ರೀ ಸಂಗಣ್ಣ ತೆಂಗಿನಕಾಯಿ ಮತ್ತು ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳು ಹಾಗೂ ಕ್ಷೇತ್ರ & ಜನಜಾಗೃತಿ ಯೋಜನಾಧಿಕಾರಿಗಳ ಉಪಸ್ಥಿಯಲ್ಲಿ ಸಭೆ ನಡೆಸಿ 2023-2024 ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ, ಅಕ್ಟೋಬರ್ 02 ಗಾಂಧಿ ಜಯಂತಿ ಕಾರ್ಯಕ್ರಮದ ಬಗ್ಗೆ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರ ಬದಲಾವಣೆ ಬಗ್ಗೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ,ಮಧ್ಯವರ್ಜನ ಶಿಬಿರ, ಜಿಲ್ಲಾ ಮಟ್ಟದ ನವಜೀವನ ಪೋಷಕರ ಸಭೆ,ನವಜೀವನೋತ್ಸವ ಕಾರ್ಯಕ್ರಮ,ವಲಯವಾರು ನವಜೀವನ ಸಮಿತಿ ರಚನೆ & ಬಲವರ್ಧನೆ, ತರಬೇತಿದಾರರ ತರಬೇತಿ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.