ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 1743 ನೇ ಮಧ್ಯವರ್ಜನಾ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಶ್ರೀ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ 1743ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ಕುಟುಂಬ ದಿನ ಕಾರ್ಯಕ್ರಮ: 1743ನೇ ಮಧ್ಯವರ್ಜನ ಶಿಬಿರದಲ್ಲಿ ಕೌಟುಂಬಿಕ ಸಾಮರಸ್ಯದ ಬಗ್ಗೆ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗ್ರತಿ ವಿಭಾಗದ ಯೋಜನಾಧಿಕಾರಿಗಳು ಅರ್ಥಪೂರ್ಣವಾಗಿ ನಡೆಸಿದರು.ಸಮಾರೋಪ ಸಮಾರಂಭ: ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ತ್ರಿವಿಧ ದಾಸೋಹಿ ಪೂಜ್ಯ ಶ್ರೀ ಮನ್ನಿರಂಜನ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ಮಾಡಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರದ ಶ್ರೀ ರಾಜಣ್ಣ ಕೊರವಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಗಣೇಶ್.ಬಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಾಮಕೃಷ್ಣ ದೊಡ್ಡಮನಿ, ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಜಿ. ವಿ. ಹಿರೇಮಠ್, ಜಿಲ್ಲಾ ಜನಜಾಗ್ರತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಹೆಚ್. ಬಿ. ಅಸೂಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಹುಣಸಿಕಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಗಣ್ಯರಾದ ಶ್ರೀ ನಾಗೇಶ್ ಟಿ ಹುಬ್ಬಳ್ಳಿ ಪುರಸಭೆ ಸದಸ್ಯರು ಮುಂಡರಗಿ ಉಪಸ್ಥಿತರಿದ್ದರು. ಸದ್ರಿ ಶಿಬಿರದಲ್ಲಿ 82 ಜನ ಮಂದಿ ಶಿಬಿರದಲ್ಲಿ ಮಾಹಿತಿ ಮಾರ್ಗದರ್ಶನ ಪಡೆದುಕೊಂಡು ಮನಪರಿವರ್ತನೆಯ ಮೂಲಕ ಶಾಶ್ವತವಾಗಿ ವ್ಯಸನ ಮುಕ್ತರಾಗಿ ಬದುಕುವ ಬಗ್ಗೆ ಸಂಕಲ್ಪ ಮಾಡಿ ನವಜೀವನಕ್ಕೆ ಪಾದಾರ್ಪಣೆ ಮಾಡಿದರು.