ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ.
ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತು ಶ್ರೀ ಹೇಮಾವತಿ ಅಮ್ಮನವರ ಕೃಪಾ ಆಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ಇಂದು ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ “ಗಾಂಧಿ ಜಯಂತಿ” ಕಾರ್ಯಕ್ರಮ ಆಚರಿಸಲಾಯಿತು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಾಯಸ್ ರವರು ಮಾತನಾಡುತ್ತಾ ಅಕ್ಟೋಬರ್ 2 ಭಾರತದ ಪಾಲಿನ ಮಹತ್ವ ದಿನ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮ ದಿನವಿಂದು. ಮಹಾತ್ಮ ಗಾಂಧೀಜಿ ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೆ ಸದಾ ಶಾಶ್ವತವಾಗಿರುವ ಹೆಸರು ಇವರೊಂದು ಶಕ್ತಿ, ಬದುಕಿನ ಆದರ್ಶಗಾಂಧೀಜಿ ತನ್ನ ಸತ್ಯ,ಅಹಿಂಸೆಯ ಸಿದ್ದಾಂತದಿಂದಲೇ ಜಗವನ್ನು ಗೆದ್ದ ಚೇತನ ಹೀಗಾಗಿ ವಿಶ್ವಾದ್ಯಂತ ಈ ದಿನವನ್ನು ಆಚರಿಸಲಾಗುತ್ತಿದೆ ಗಾಂಧೀಜಿಯವರು ಕಂಡ ರಾಮ ರಾಜ್ಯದ ಕನಸನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನನಸು ಮಾಡುವ ನಿಟ್ಟಿನಲ್ಲಿ ಜನಜಾಗೃತಿ ವೇದಿಕೆಯ ಮೂಲಕ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರೇರಕ ಶಕ್ತಿ ಎಂದರು.ಈ ಸಂದರ್ಭದಲ್ಲಿ ಜಾಗೃತಿ ಸೌದದ ಪ್ರಬಂಧಕರಾದ ಶ್ರೀ ಕಿಶೋರ್, ಆಡಳಿತಾತ್ಮಕ ಯೋಜನಾಧಿಕಾರಿಗಳು ಶ್ರೀ ಮಾಧ ಗೌಡ , ಕಚರಿಯ ಪ್ರಬಂಧಕರು , ಸಹಾಯಕ ಪ್ರಬಂಧಕರು , ಶಿವರಾಧಿಕಾರಿ , ಆರೋಗ್ಯ ಸಹಾಯಕರು ನವ ಜೀವನ ಸಮಿತಿಯ ಸದಸ್ಯರು, ಹಾಗೂ ಜಾಗೃತಿ ಸೌದ ಕಟ್ಟಡದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
