ಗುಬ್ಬಿ ತಾಲೂಕಿನಲ್ಲಿ 1830 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1830 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗುಬ್ಬಿ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಗುಬ್ಬಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು 1 ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಶ್ರೀ ವೆಂಕಟೇಶ್ವರ ಸ್ವಾಮಿ ಕಲ್ಯಾಣ ಮಂಟಪ ಟ್ರಸ್ಟ್ ಎಸ್ ಕೋಡಗೆಹಳ್ಳಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಕೊಪ್ಪ ವಲಯ, ನವಜೀವನ ಸಮಿತಿಗಳು ಗುಬ್ಬಿ ತಾಲೂಕು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ದಾನಿಗಳ ಸಹಕಾರದೊಂದಿಗೆ 1830 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಎಸ್ ಕೊಡಗೇನಹಳ್ಳಿ ಪಾಳ್ಯದ ಶ್ರೀ ವೆಂಕಟೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಮ.ನಿ.ಪ್ರ ಚಂದ್ರಶೇಖರ ಮಹಾಸ್ವಾಮಿಗಳು ಶ್ರೀ ಗವಿಮಠ ಬೆಟ್ಟದಹಳ್ಳಿ ಇವರು ವಹಿಸಿ ಆಶೀರ್ವಚನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟೇಗೌಡರು ಅಧ್ಯಕ್ಷರು 1830 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ಗುಬ್ಬಿ ತಾಲೂಕು ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ಎ. ಗೋವಿಂದರಾಜು ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಕಾರ್ಯಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ತುಮಕೂರು ಜಿಲ್ಲೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಘಾಟನಾ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಸತೀಶ್ ಸುವರ್ಣ ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತುಮಕೂರು 1 ಜಿಲ್ಲೆ ಇವರು ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ನಡೆದು ಬಂದ ಹಾದಿ, ಅಭಿವೃದ್ಧಿಯ ಕಾರ್ಯಕ್ರಮ, ಜನಜಾಗೃತಿ ವೇದಿಕೆ ಆರಂಭ, ಜನಜಾಗೃತಿ ವೇದಿಕೆ ಮೂಲಕ ನಡೆಯುವ ಮದ್ಯವರ್ಜನ ಶಿಬಿರ ಹಾಗೂ ಪಾನಮುಕ್ತರ ಸಂಘಟನೆ ಕುರಿತು ವಿಸ್ತರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಶೀನಪ್ಪ ಎಂ. ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮದ್ಯಪಾನವೆಂಬುದೊಂದು ಸಮಾಜವನ್ನು ಬಾದಿಸುವ ಮತ್ತು ಜಾಗೃತೆ ತಪ್ಪಿದರೆ ಯಾರನ್ನೂ ಬಿಡದ ಖಾಯಿಲೆ ಮದ್ಯಪಾನಕ್ಕೆ ಜಾತಿ, ಧರ್ಮ, ಪಕ್ಷ, ಭೇದ ಯಾವುದೂ ಇರುವುದಿಲ್ಲ ಹಾಗಾಗಿ ಇದೊಂದು ಸರ್ವಧರ್ಮ ಕಾರ್ಯಕ್ರಮ ಜೊತೆಗೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ, ವಾತ್ಸಲ್ಯ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಪ್ರೇಮಾ ಅಧ್ಯಕ್ಷರು ಗ್ರಾಮ ಪಂಚಾಯಿತಿ ಎಸ್ ಕೊಡಗೇನಹಳ್ಳಿ, ಶ್ರೀ ರಂಗಸ್ವಾಮಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಎಂ ಎನ್ ಕೋಟೆ, ಶ್ರೀ ಸಿ.ಕೆ ಲೋಕೇಶ್ ಅಧ್ಯಕ್ಷರು 1685 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಚೇಳೂರು, ಶ್ರೀ ರಘುನಂದನ್ ಉಪಾಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ರಮೇಶ್ ಗೌರವ ಸಲಹೆಗಾರರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ತಮ್ಮಯ್ಯಣ್ಣ ಗೌರವ ಸಲಹೆಗಾರರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀಮತಿ ವೆಂಕಟಲಕ್ಷ್ಮಮ್ಮ ಗೌರವ ಸಲಹೆಗಾರರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಜಿ. ಆರ್. ಶಿವಕುಮಾರ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಗುಬ್ಬಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, 1830 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಮತ್ತು ಊರಿನ ಗಣ್ಯರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಮತ್ತು ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವರು ಉಪಸ್ಥಿತರಿದ್ದರು. ಶ್ರೀಮತಿ ಗಾಯತ್ರಿ ಟಿ. ಜೊತೆ ಕಾರ್ಯದರ್ಶಿ/ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕೊಪ್ಪ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರು, ನವಜೀವನ ಸಮಿತಿ ಸದಸ್ಯರು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.