ಚನ್ನಗಿರಿ ತಾಲೂಕಿನ ನಲ್ಲೂರೂ ವಲಯದ ಶಾದಿ ಮಹಲನಲ್ಲಿ ನಡೆದ ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮವನ್ನು ಸನ್ಮಾನ್ಯ ಶ್ರೀ ಬಸವರಾಜ್ ಶಿವಗಂಗಾ ಶಾಸಕರು ಚನ್ನಗಿರಿ ವಿಧಾನಸಭಾ ಕ್ಷೇತ್ರ, ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ M B ನಾಗರಾಜ್ ಕಾಕನೂರು, ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಚಿತ್ರದುರ್ಗ ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀಯುತ ದಿನೇಶ್ ಪೂಜಾರಿ ಸರ್ ಅವರು ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಚನ್ನಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ಶ್ರೀಧರ್ ಸರ್ ಅವರು ಕಾರ್ಯಕ್ರಮದಲ್ಲಿ ಇರುವ ಎಲ್ಲರನ್ನ ಸ್ವಾಗತಿಸಿದರು. ಸಂತೆಬೆನ್ನೂರು ಯೋಜನಾಧಿಕಾರಿಗಳಾದ ರವಿಚಂದ್ರ ಸರ್ ಅವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮ ಅವರು, ಊರಿನ ಗಣ್ಯರಾದ L ಜನಾರ್ಧನ್ ಅವರು ಹಾಗೂ ಶ್ರೀ ಇಮ್ತಿಯಾಜ್ ಬೇಗ್ ಅವರು, ಶ್ರೀ ಮಹಮ್ಮದ್ ಸೈಫುಲ್ಲಾ ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಹಾಗೇ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರ ಹಾಗೂ ವಲಯದ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು, ಒಕ್ಕೂಟದವರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
