ಚಿಕ್ಕನಾಯಕನಹಳ್ಳಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸಮಾಜ ಕಾರ್ಯ ವಿಭಾಗದ ಸಹಕಾರದೊಂದಿಗೆ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮ

Janajagurthi Vedike News

ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕನಾಯಕನಹಳ್ಳಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸಮಾಜ ಕಾರ್ಯ ವಿಭಾಗದ ಸಹಕಾರದೊಂದಿಗೆ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರು ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ದಿಬ್ಬದಹಳ್ಳಿ ಶ್ಯಾಮಸುಂದರರವರು ವಿಶೇಷ ಉಪನ್ಯಾಸ ನೀಡಿದರು.