ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1826 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಚಿಕ್ಕಬಳ್ಳಾಪುರ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಚಿಕ್ಕಬಳ್ಳಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಬಳ್ಳಾಪುರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ 1826 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ರಮಾನುಜ ಸಭಾಭವನದ ಜಾತವಾರದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ 1826 ನೇ ಶಿಬಿರದ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ವೇದಿಕೆಯಲ್ಲಿ ಹಾಜರಿದ್ದ ಗಣ್ಯಮಾನ್ಯರುಗಳು ದೀಪ ಪ್ರಜ್ವಲಿಸುವ ಮೂಲಕ 1826 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಜನಜಾಗೃತಿ ವೇದಿಕೆಯ ಆಧ್ಯಕ್ಷರಾದ ಯಲುವಳ್ಳಿ ಶ್ರೀ ರಮೇಶ್ ರವರು ಮಾತನಾಡಿ ಸಮಾಜದ ಸ್ವಾಸ್ಥವನ್ನು ಸರಿಪಡಿಸಲು ಪೂಜ್ಯರ ಪವಿತ್ರ ಕಾರ್ಯಕ್ರಮವೇ ಮದ್ಯವರ್ಜನ ಶಿಬಿರ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರಶಾಂತ್ ಸಿ. ಎಸ್. ಜನಜಾಗೃತಿ ವೇದಿಕೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳ ಕುರಿತು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿ ಮುಖ್ಯ ಅತಿಥಿಗಳ ನುಡಿಗಳನ್ನು ನುಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಕೆ. ಎಂ. ಮುನೇಗೌಡ, ಶ್ರೀ ಮರಳಕುಂಟೆ ಕೃಷ್ಣಮೂರ್ತಿ, ಜಾತವಾರ ಪಂಚಾಯ್ತಿ ಪಿಡಿಒ ಶ್ರೀ ಪ್ರದೀಪ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಕೆ ನುಡಿಗಳನ್ನು ನುಡಿದರು. 1826 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಸಿ. ರವರು ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ದೇವಿಪ್ರಸಾದ್ ಸುವರ್ಣ, ಆರೋಗ್ಯ ಸಹಾಯಕ ಶ್ರೀ ವೆಂಕಟೇಶ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ದರ್ಶನ್ ಎಂ. ಎಸ್., ಶ್ರೀ ಈಶ್ವರ್ ಚಿಕ್ಕಬಳ್ಳಾಪುರ ಯೋಜನಾ ಕಚೇರಿ ವ್ಯಾಪ್ತಿಯ ಮೇಲ್ವಿಚಾರಕರು, ಆಂತರಿಕ ಲೆಕ್ಕ ಪರಿಶೋಧಕರು, ಕೃಷಿ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
