ಪರಮಪೂಜ್ಯ ಡಾ| ಡಿ. ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಚಿಕ್ಕಮಗಳೂರು ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಚಿಕ್ಕಮಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೆಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ನವಜೀವನ ಸಮಿತಿ, ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ಚಿಕ್ಕಮಗಳೂರು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಗ್ರಾಮ ಪಂಚಾಯಿತಿ ಅಂಬಳೆ, ವಲಯ ಸ್ಥಳೀಯ ಸಂಘ ಸಂಸ್ಥೆಗಳ ದಾನಿಗಳ ಸಹಕಾರದೊಂದಿಗೆ ನಡೆದ 1831 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಶ್ರೀ ಹಿರೇಬೀರಲಿಂಗೇಶ್ವರ ಸಮುದಾಯ ಭವನ ಅಂಬಳೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಸವರಾಜ್ ಅಧ್ಯಕ್ಷರು 1831 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಂಬಳೆ ರವರು ವಹಿಸಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರು ಶ್ರೀಮತಿ ಗೀತಾ ಬಿ. ರವರು ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಳಾಗಿ ಶ್ರೀ ರಾಜಣ್ಣ ಮೂ. ಕೊರವಿ ರಾಜ್ಯಾಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಶ್ರೀ ಪ್ರಶಾಂತ್ ಚಿತ್ರಗುತ್ತಿ ಸ್ಥಾಪಕ ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಶ್ರೀ ಸದಾನಂದ ಬಂಗೇರ ಜಿಲ್ಲಾ ನಿರ್ದೇಶಕರು ಚಿಕ್ಕಮಗಳೂರು, ಶ್ರೀ ಮಂಜುನಾಥ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀ ಮಂಜೇಗೌಡ 1831 ನೇ ಮದ್ಯವರ್ಜನ ಶಿಬಿರದ ಗೌರವಾಧ್ಯಕ್ಷರು ಅಂಬಳೆ, ಶ್ರೀಮತಿ ಜಯಮ್ಮ ಗ್ರಾಮ ಪಂಚಾಯಿತಿ ಸದಸ್ಯರು ಅಂಬಳೆ, ಶ್ರೀ ರುದ್ರೇಶ್ 1831 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಶ್ರೀಮತಿ ಸುಮಾ, ಶ್ರೀಮತಿ ಸೀಮಾ 1831 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿಗಳು ಜನಜಾಗೃತಿ ಪ್ರಾದೇಶಿಕ ವಿಭಾಗ ಚಿತ್ರದುರ್ಗ, ಶ್ರೀ ರಮೇಶ್ ನಾಯಕ್ ಕ್ಷೇತ್ರ ಯೋಜನಾಧಿಕಾರಿಗಳು ಚಿಕ್ಕಮಗಳೂರು ತಾಲೂಕು 02 ಉಪಸ್ಥಿತರಿದ್ದರು. ಶ್ರೀ ರುದ್ರಪ್ಪ ಹೂಗಾರ ಜನಜಾಗೃತಿ ಮೇಲ್ವಿಚಾರಕ ಚಿತ್ರದುರ್ಗ ಪ್ರಾದೇಶಿಕ ವಿಭಾಗ, ಚಂದನ ಮೇಲ್ವಿಚಾರಕರು ಹಿರೇಮಗಳೂರು, ಶ್ರೀಮತಿ ರೂಪ
ಮೇಲ್ವಿಚಾರಕರು ಅಂಬಳೆ ವಲಯ, ವಲಯದ ಸೇವಾ ಪ್ರತಿನಿಧಿಗಳು, ಜಿಲ್ಲಾ ಪ್ರಬಂಧಕರು, ತಾಲೂಕು ಆಡಳಿತ ಪ್ರಬಂಧಕರು, ಸ್ವಸಹಾಯ ಸಂಘ ಮತ್ತು ಪ್ರತಿಬಂಧು ಸಂಘಗಳ ಸದಸ್ಯರು, ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
