ಚಿತ್ರದುರ್ಗ ತಾಲೂಕಿನಲ್ಲಿ 1895 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike News

ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶಿರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಚಿತ್ರದುರ್ಗ ತಾಲೂಕು ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಚಿತ್ರದುರ್ಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ. )ಚಿತ್ರದುರ್ಗ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಮಯ ಮಂಡಳಿ ಬೆಂಗಳೂರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇವರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಚಿತ್ರದುರ್ಗ, ಸ್ಥಳೀಯ ಸಂಘ ಸಂಸ್ಥೆಗಳು, ಹಾಲು ಉತ್ಪಾದಕರ ಸಹಕಾರ ಸಂಘ, ಆರಕ್ಷಕ ಇಲಾಖೆ, ಆರೋಗ್ಯ ಇಲಾಖೆ, ದಾನಿಗಳು ಚಿತ್ರದುರ್ಗ ಇವರಗಳ ಸಹಾಯದೊಂದಿಗೆ ಚಿತ್ರದುರ್ಗ ಪ್ರಾದೇಶಿಕ ವಿಭಾಗ ಚಿತ್ರದುರ್ಗ ತಾಲೂಕಿನ ಡಾ| ಬಿ. ಆರ್. ಅಂಬೇಡ್ಕರ್ ಸಮುದಾಯ ಭವನ ಬುದ್ಧ ನಗರ ಚಿತ್ರದುರ್ಗದಲ್ಲಿ 1895 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಸುಮಿತಾ ರಾಘವೇಂದ್ರ ಅಧ್ಯಕ್ಷರು ನಗರಸಭೆ ಚಿತ್ರದುರ್ಗ ರವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಂಜಪ್ಪ ಅಧ್ಯಕ್ಷರು 1895 ನೇ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನೆ ಸಮಿತಿ ರವರು ವಹಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ದಿನಕರ್ ಐ ಪಿ ಎಸ್. ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಚಿತ್ರದುರ್ಗ, ಶ್ರೀ ದಿನೇಶ್ ಪೂಜಾರಿ ಎಂ. ಗೌರವಾನ್ವಿತ ಜಿಲ್ಲಾ ನಿರ್ದೇಶಕರು, ಶ್ರೀ ನಾಗರಾಜ ಸಂಗಮ ಜಿಲ್ಲಾ ಜನಜಾಗೃತಿ ಸದಸ್ಯರು, ಶ್ರೀಮತಿ ರೂಪ ಜನಾರ್ಧನ್ ಜಿಲ್ಲಾ ಜನಜಾಗೃತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀ ಅಶೋಕ್ ಬಿ. ಕ್ಷೇತ್ರ ಯೋಜನಾಧಿಕಾರಿ ಚಿತ್ರದುರ್ಗ, ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಚಿತ್ರದುರ್ಗ ಪ್ರಾದೇಶಿಕ ವಿಭಾಗ, ಶ್ರೀ ದಿವಾಕರ ಪೂಜಾರಿ ಶಿಬಿರಾಧಿಕಾರಿ, ಶ್ರೀಮತಿ ಸೌಮ್ಯ ಆರೋಗ್ಯ ಸಹಾಯಕರು, ತಾಲೂಕಿನ ಮೇಲ್ವಿಚಾರಕರು, ಜನಜಾಗೃತಿ ಮೇಲ್ವಿಚಾರಕರು, ವಲಯದ ಸೇವಾ ಪ್ರತಿನಿಧಿಗಳು, ಊರಿನ ಗಣ್ಯರು, ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು ಮತ್ತು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು