ಮಲೇಬೆನ್ನೂರು ಯೋಜನಾ ಕಛೇರಿ ವ್ಯಾಪ್ತಿಯ ಮಲೇನ್ನೂರು ವಲಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Janajagurthi Vedike News

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಯೋಜನಾ ಕಛೇರಿ ವ್ಯಾಪ್ತಿಯ ಮಲೇನ್ನೂರು ವಲಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ.ಶ್ರೀ ನಾಗರಾಜ್ ರವರು ಮಾತನಾಡುತ್ತಾ ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಕುರಿತು ಹಾಗೂ ಆರೋಗ್ಯದಲ್ಲಿ ಆಗುವ ಹಾನಿಯ ಲಕ್ಷಣಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಯೋಜನಾಧಿಕಾರಿ, ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ವಲಯ ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.