ಚಿತ್ರದುರ್ಗ ಪ್ರಾದೇಶಿಕ ವಿಭಾಗದ ದಾವಣಗೆರೆ ಜಿಲ್ಲೆಯ ಬಸವಪಟ್ಟಣ ತಾಲೂಕಿನಲ್ಲಿ 1745 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ದಾವಣಗೆರೆ ಜಿಲ್ಲೆಯ ಬಸವಪಟ್ಟಣ ತಾಲೂಕಿನ ಗುರುಸಿದ್ದೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ 1745 ನೇ ಮಧ್ಯವರ್ಜನ ಶಿಬಿರದ 8 ನೇ ದಿನದಲ್ಲಿ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀಯುತ ನಾಗರಾಜ್ ಅವರು ನೆರವೇರಿಸಿ ಕೊಟ್ಟರು ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗೌರವಾನ್ವಿತರು ಶ್ರೀ ಟಿ ಎಸ್ ಸೋಮಶೇಖರ್ ರವರು, ಉಪಾಧ್ಯಕ್ಷರಾದ ಶ್ರೀ ಕೆ ಜೆ ರೇವಣ್ಣ ಸಿದ್ದಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಕೂಲಂಬಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಸವಪಟ್ಟಣ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ನವೀನ್ ರವರು, ಪತ್ರಕರ್ತರಾದ ಸದಾನಂದ ರವರು,ವಲಯದ ಮೇಲ್ವಿಚಾರಕರು ಪಲ್ಲವಿ ಯವರು, ಜನಜಾಗೃತಿ ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಮೇಲ್ವಿಚಾರಕರಾದ ರುದ್ರಪ್ಪ ರವರು, ತಾಲೂಕಿನ ಎಲ್ಲಾ ವಲಯದ ಮೇಲ್ವಿಚಾರಕರು, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ತಾಲೂಕಿನ ಜೀವನ ಸಮಿತಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.