ಚೆನ್ನಗಿರಿ ತಾಲೂಕಿನಲ್ಲಿ 1825 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1825 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನಲ್ಲೂರು ಚನ್ನಗಿರಿ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಚೆನ್ನಗೆರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿತ್ರದುರ್ಗ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ 1825 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶ್ರೀ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ನಾಗರಾಜ್ ಕುಲಾಲ್ ರವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ 1825 ನೇ ಶಿಬಿರದ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ವೇದಿಕೆಯಲ್ಲಿ ಹಾಜರಿದ್ದ ಗಣ್ಯ ಮಾನ್ಯರುಗಳು ದೀಪ ಪ್ರಜ್ವಲಿಸುವ ಮೂಲಕ 1825 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಪೂಜಾರಿ ರವರು ಜನಜಾಗೃತಿ ವೇದಿಕೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳ ಕುರಿತು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದರು. ಶ್ರೀ ಓಂಕಾರಮೂರ್ತಿ ಕೆ. ಜಿ ಅಧ್ಯಕ್ಷರು 1825 ನೇ ಮಧ್ಯವರ್ಜನ ವ್ಯವಸ್ಥಾಪನ ಸಮಿತಿ ಬಳಸಾಗರ, ಶ್ರೀ ಮಾಡಾಳ ವಿರುಪಾಕ್ಷಪ್ಪ ಮಾಜಿ ಶಾಸಕರು ಚೆನ್ನಗಿರಿ ವಿಧಾನ ಸಭಾ ಕ್ಷೇತ್ರ, ಶ್ರೀ ಎಂ.ಬಿ. ನಾಗರಾಜ್ ಮೇಕಪ್ ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀಮತಿ ಸುಶೀಲಮ್ಮ ಹನುಮಂತಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರು ಬುಳಸಾಗರ, ಶ್ರೀಮತಿ ಯಶೋಧಮ್ಮ ಮರಳಪ್ಪ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಕೆ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ದಿನೇಶ್ ಮರಾಠಿ, ಆರೋಗ್ಯ ಸಹಾಯಕಿ ಶ್ರೀಮತಿ ಜಯಲಕ್ಷ್ಮಿ, ಶ್ರೀ ಗುರುಮೂರ್ತಿ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.