ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಧಾರವಾಡ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ, ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಧಾರವಾಡದ ಪ್ರಾದೇಶಿಕ ಕಚೇರಿಯಲ್ಲಿ ಶ್ರೀ ರಾಜಣ್ಣ ಕೊರವಿ ರಾಜ್ಯಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದುಗ್ಗೇಗೌಡ ಪ್ರಾದೇಶಿಕ ನಿರ್ದೇಶಕರು, ಫಿರೋಜ್ ಖಂಡೇಕರ್, ಸತೀಶ್ ನಾಯ್ಕ, ಜಿಲ್ಲಾ ವೇದಿಕೆಯ ಪದಾಧಿಕಾರಿಗಳು ಧಾರವಾಡ ಜಿಲ್ಲೆಯ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ವಿಶೇಷವಾಗಿ ಅಕ್ಟೋಬರ್.2 ಕಾರ್ಯಕ್ರಮ ದ ಬಗ್ಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಮಾಜಸೇವಕರು ಉದ್ಯಮಿ ಶ್ರೀ ಸಂತೋಷ್ ಆರ್. ಶೆಟ್ಟಿ ಇವರನ್ನು ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರಭಾಕರ್ ನಾಯಕ್ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.