ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ 1980 ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮವನ್ನು ಯೋಜನಾಧಿಕಾರಿಯವರಾದ ಶ್ರೀ ನಾಗರಾಜ್ ರವರು ನಡೆಸಿಕೊಟ್ಟರು ಮತ್ತು ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯದಲ್ಲಿ ಸ್ವಾಮೀಜಿಯವರು ಎಲ್ಲ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು. ಗೌರವ ಉಪಸ್ಥಿತಿಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು, ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರಾದ ಶ್ರೀ ವಸಂತ ಬಂಗೇರ, ಯೋಜನಾಧಿಕಾರಿಯವರಾದ ಶ್ರೀ ಕುಸುಮಾದರ್ ಕೆ., ಮೇಲ್ವಿಚಾರಕರು, ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.