ತಿಪಟೂರು ತಾಲೂಕಿನಲ್ಲಿ 1918 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

1918 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ತಿಪಟೂರು ಗ್ರಾಮಾಂತರ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ತಿಪಟೂರು ಗ್ರಾಮಾಂತರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು-1 ಜಿಲ್ಲೆ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು, ನೊಣವಿನಕೆರೆ ವಲಯ ಮತ್ತು ಬಜಗೂರು ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತಿಪಟೂರು ಗ್ರಾಮಾಂತರ, ವಿವಿಧ ಸಂಘ ಸಂಸ್ಥೆಗಳು ತಿಪಟೂರು ಗ್ರಾಮಾಂತರ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಯವರ ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ನಡೆದ 1918 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ಉಡಸಲಮ್ಮ ಕೆಂಪಮ್ಮ ಸಮುದಾಯಭವನ ನೊಣವಿನಕೆರೆಯಲ್ಲಿ ಜರುಗಿತು.ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು ಜನಜಾಗೃತಿ ವೇದಿಕೆಯ ಹುಟ್ಟು ಮತ್ತು ಬೆಳವಣಿಗೆಗಳ ಬಗ್ಗೆ ತಿಳಿಸುವ ಮೂಲಕ 1918 ನೇ ಮದ್ಯವರ್ಜನ ಶಿಬಿರದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಶ್ರೀ ಶ್ರೀ ಶ್ರೀ ಅಭಿನವ ಕಾಡಸಿದ್ದೇಶ್ವರ ಮಹಾಸ್ವಾಮಿಜಿಗಳು ಮತ್ತು ಕಾರ್ಯಕ್ರಮದಲ್ಲಿ ಆಸೀನರಾಗಿದ್ದ ಅತಿಥಿ ಮಹೋದಯರು ದೀಪವನ್ನು ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತುಮಕೂರು ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಸುವರ್ಣ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಹಾಗೂ ಪೂಜ್ಯ ಖಾವಂದರು ಶ್ರೀ ಕ್ಷೇತ್ರದ ಮುಖೇನ ಮಾಡುತ್ತಿರುವ ಚತುರ್ವಿಧ ದಾನಗಳ ಬಗ್ಗೆ ಹಾಗೂ ಜನಜಾಗೃತಿ ವೇದಿಕೆಯಿಂದ ನಡೆಸುವ ಮದ್ಯವರ್ಜನ ಶಿಬಿರದ ಬಗ್ಗೆ ಹಾಗೂ ಶಿಬಿರದ ಪ್ರಯೋಜನದಿಂದ 175000 ಹೆಚ್ಚಿನ ಸಂಸಾರಗಳು ಸುಖಿಯಾದ ಜೀವನವನ್ನು ನಡೆಸಲು ಮುಖ್ಯ ಕಾರಣ ಮದ್ಯವರ್ಜನ ಶಿಬಿರ ಎಂದು ತಿಳಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ಸವಿವರವಾಗಿ ತಿಳಿಸುವ ಮೂಲಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನೊಣವಿನಕೆರೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀ ಬಸವರಾಜ್ ಕವಟಗಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಪ್ರತಾಪ್ ಸಿಂಗ್, ಶ್ರೀ ತರಕಾರಿ ಗಂಗಾಧರ್, ಅಶ್ವಿನಿ ಆಸ್ಪತ್ರೆ ನೊಣವಿನಕೆರೆ ವೈದ್ಯಾಧಿಕಾರಿ ಡಾ.ಅಶ್ವಿನಿ ರವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಶ್ರೀ ಶ್ರೀ ಶ್ರೀ ಅಭಿನವ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿರವರು 1918 ನೇ ಮದ್ಯವರ್ಜನ ಶಿಬಿರದ ಯಶಸ್ಸಿಗೆ ಶುಭ ಹಾರೈಸಿ ದಿವ್ಯ ಆಶೀರ್ವಚನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು 1918 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಅಧ್ಯಕ್ಷರಾದ ಶ್ರೀ ದಯಾನಂದ ಕಾ.ಬೋರಪ್ಪ ರವರು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ಕುಮಾರ್, ಆರೋಗ್ಯ ಸಹಾಯಕಿ ಕು. ರಂಜಿತಾ, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕರಾದ ಶ್ರೀ ದರ್ಶನ್ ಎಂ. ಎಸ್., ನೊಣವಿನಕೆರೆ ವಲಯದ ಮೇಲ್ವಿಚಾರಕರಾದ ಶ್ರೀ ಮುನಿಕೃಷ್ಣ, ಬಜಗೂರು ವಲಯದ ಮೇಲ್ವಿಚಾರಕರಾದ ಶ್ರೀ ಮಧು, ತಿಪಟೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಮೇಲ್ವಿಚಾರಕರು, ಆಂತರಿಕ ಲೆಕ್ಕ ಪರಿಶೋಧಕರು, ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳು, ನೊಣವಿನಕೆರೆ ಹಾಗೂ ಬಜಗೂರು ವಲಯದ ಸೇವಾ ಪ್ರತಿನಿಧಿಗಳು ಮತ್ತು ನೊಣವಿನಕೆರೆ ವಲಯದ ಸಿ ಎಸ್ ಸಿ ಸೇವಾದಾರರು ಉಪಸ್ಥಿತರಿದ್ದರು.