ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1838 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ತೀರ್ಥಹಳ್ಳಿ ತೀರ್ಥಹಳ್ಳಿ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತೀರ್ಥಹಳ್ಳಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಶಿವಮೊಗ್ಗ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ 1838 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಆರ್ ಎಸ್ ಬಿ ಸಭಾಭವನ ಕುರುವಳ್ಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಶ್ರೀ ದಿನೇಶ್ ಮರಾಠಿ ರವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ, ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ 1838 ನೇ ಶಿಬಿರದ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ವೇದಿಕೆಯಲ್ಲಿ ಹಾಜರಿದ್ದ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ 1838 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಮಾನ್ಯ ಮಾಜಿ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಶ್ರೀ ಕಿಮ್ಮನೆ ರತ್ನಾಕರ್ ರವರು ಜನಜಾಗೃತಿ ವೇದಿಕೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳ ಕುರಿತು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿ ಉದ್ಘಾಟಕರ ನುಡಿಗಳನ್ನು ನುಡಿದರು. ಶ್ರೀ ಗಣೇಶ್ ಆರ್. ನಾಯಕ್ ಅಧ್ಯಕ್ಷರು 1838 ನೇ ಮಧ್ಯವರ್ಜನ ವ್ಯವಸ್ಥಾಪನ ಸಮಿತಿ ತೀರ್ಥಹಳ್ಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀ ಮುರುಳಿಧರ್ ಶೆಟ್ಟಿ ಜಿಲ್ಲಾ ನಿರ್ದೇಶಕರು, ಶ್ರೀ ರಾಘವೇಂದ್ರ ಸೊಪ್ಪುಗುಡ್ಡೆ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀಮತಿ ಸುಮಾ ರಾಮಚಂದ್ರ, ಶ್ರೀಮತಿ ವಿನುತಾ ಮುರಳಿಧರ್, ಶ್ರೀ ಮುದ್ದಣ್ಣ, ಶ್ರೀ ಶಶಿಧರ್ ಹಂದೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಶ್ರೀ ವೆಂಕಟೇಶ್ ಯು. ಡಿ. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಕೆ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಹಾಯಕಿ ಶ್ರೀಮತಿ ಸೌಮ್ಯ, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
