ತುಮಕೂರು ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆ

Janajagurthi Vedike Uncategorized

ತುಮಕೂರು -2 ಜಿಲ್ಲೆಯ ಜಿಲ್ಲಾ ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಲಾಲ್ ಪೇಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯನ್ನು ನಿಕಟಪೂರ್ವ ಅಧ್ಯಕ್ಷ ರಾದ ಶ್ರೀ ರಾಮಚಂದ್ರ ಗುಪ್ತರವರು ಉದ್ಘಾಟಿಸಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯರ ವಿರುದ್ಧದ ಷಡ್ಯಂತ್ರ ಮಾಡುವವರ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಜನಜಾಗೃತಿಯ ಸದಸ್ಯರು, ಗಣ್ಯರು ಭಾಗವಹಿಸಿದರು. ಈ ಸಭೆಯಲ್ಲಿ ಗತಸಭೆಯ ವರದಿಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಕುಮಾರ್ ಮಂಡಿಸಿದರು. ಶ್ರೀ ಕ್ಷೇತ್ರ ಮತ್ತು ಪೂಜ್ಯರ ಬಗ್ಗೆ ಆಪಪ್ರಚಾರ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಮಂಜುನಾಥ್ ಲಾಲ್ ಪೇಟೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯರ ವಿರುದ್ಧ ದುಷ್ಟ ಶಕ್ತಿಗಳು ಮಾಡುವ ಅಪಪ್ರಚಾರವನ್ನೂ ಯಾವುದೇ ಕಾರಣಕ್ಕೂ ಸಹಿಸಲು ಆಗಲ್ಲ ಆದ್ದರಿಂದ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಬಗ್ಗೆ ಮಾತನಾಡಿದರು. ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ರವರು ಜಿಲ್ಲೆಯಲ್ಲಿ ನಡೆಯುವ ಶಿಬಿರಗಳ ಬಗ್ಗೆ ನವಜೀವನ ಸಮಿತಿಗಳ ಬಗ್ಗೆ ಮತ್ತು ಸ್ವಸ್ಥ ಸಂಕಲ್ಪ ಕಾರ್ಯಕ್ರಮ ಗಳು ನಡೆಸುವ ಕುರಿತು ವಿವರಿಸಿದರು. ಸಭೆಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು, ಗಣ್ಯರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.