ತುಮಕೂರು -1 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು -1 ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 14/05/2024 ಮಂಗಳವಾರ ತುಮಕೂರು-1 ಜಿಲ್ಲಾ ಕಛೇರಿ ಸಭಾಂಗಣದಲ್ಲಿ ತುಮಕೂರು -1 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು. ವೇದಿಕೆಯಲ್ಲಿ ತುಮಕೂರು -1 ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀಯುತ ಅಮರ್ ನಾಥ್ ಶೆಟ್ಟಿ ರವರು, ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ ಎಂ., ಜಿಲ್ಲಾ ವೇದಿಕೆ ಉಪಾಧ್ಯಕ್ಷರಾದ ಶ್ರೀಯುತ ಗಣೇಶ್ ಪ್ರಸಾದ್, ಜಿಲ್ಲಾ ವೇದಿಕೆಯ ಕಾರ್ಯದರ್ಶಿಗಳು, ತುಮಕೂರು -1 ಜಿಲ್ಲೆಯ ಮಾನ್ಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಸತೀಶ್ ಸುವರ್ಣ, ತುಮಕೂರು -1 ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಡಾ.ಸಂಜಯ್ ನಾಯಕ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಯುತ ತಿಮ್ಮಯ್ಯ ನಾಯ್ಕ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.