ತಿಪಟೂರು ತಾಲೂಕಿನ ರಂಗಾಪುರ ವಲಯದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ

Janajagurthi Vedike News

ತುಮಕೂರು 1 ಜಿಲ್ಲೆಯ ತಿಪಟೂರು ತಾಲೂಕಿನ ರಂಗಾಪುರ ವಲಯದ ಶ್ರೀ ಗುರುಪರದೇಶಿಕೇಂದ್ರ ಮಠದ ಶ್ರೀ ಗುರುಪರದೇಶಿ ಮಹಾಸ್ವಾಮಿಗಳ ಸಮ್ಮುಖದಲ್ಲಿ ವಿಶ್ವ ಮಾದಕ ವಸ್ತು ವಿರೋದಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ ಎಂ. ರವರು ದುಶ್ಚಟಮುಕ್ತ ಸಮಾಜದ ನಿರ್ಮಾಣಕ್ಕೆ ಪೂಜ್ಯ ಖಾವಂದರು ಅವಿರತ ಶ್ರಮಿಸುತ್ತಿದ್ದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ನ ಸಹಯೋಗದೊಂದಿಗೆ ಮದ್ಯವರ್ಜನ ಶಿಬಿರ, ಶಾಲೆಗಳಲ್ಲಿ ಸ್ವಾಸ್ತ್ಯಸಂಕಲ್ಪ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದಲ್ಲದೇ ಮಾದಕ ವಸ್ತು ವಿರೋದಿ ದಿನದ ಆಚರಣೆಯ ಮುಖೇನ ಸಂಪನ್ಮೂಲ ವ್ಯಕ್ತಿಗಳಿಂದ ರಾಜ್ಯದ ಜನತೆಗೆ ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿಗಳು, ಕೃಷಿ ಮೇಲ್ವಿಚಾರಕರು, ವಲಯ ಮೇಲ್ವಿಚಾರಕರು, ಶ್ರೀ ಗುರುಪರದೇಶಿ ಕೇಂದ್ರದ ಸಿಬ್ಬಂದಿ ವರ್ಗ, ಸೇವಾಪ್ರತಿನಿಧಿ, ಸ್ವಸಹಾಯ, ಜ್ಞಾನವಿಕಾಸ ಹಾಗೂ ಪ್ರಗತಿಬಂಧು ಪಾಲುದಾರ ಬಂದುಗಳು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.