ತುರುವೇಕೆರೆ ಯೋಜನಾ ಕಛೇರಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ 1742ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಪಾನಮುಕ್ತರ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-1 ಜಿಲ್ಲೆಯ ತುರುವೇಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಕಸಬಾ ವಲಯದ ಬಿ.ಜಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1742ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಪಾನಮುಕ್ತರ ನವಜೀವನೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಕರಿವೃಷಭ ದೇಶಿಕೇಂದ್ರ ಮಹಾಸ್ವಾಮೀಜಿ ಸೋಮೇಕಟ್ಟೆ ಕಾಡಸಿದ್ದೇಶ್ವರ ಮಠ ನೊಣವಿನಕೆರೆರವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿ ಶಿಬಿರಾರ್ಥಿಗಳಿಗೆ ಪರಮ ಪೂಜ್ಯ ಖಾವಂದರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜಕ್ಕೆ ನೀಡಿರುವ ಕೊಡುಗೆಯ ಬಗ್ಗೆ ಶಿಬಿರಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆಶೀರ್ವಚನವನ್ನು ನೀಡಿದರು.