ದಕ್ಷಿಣ ಕನ್ನಡ 2 ಜಿಲ್ಲೆಯ ಕಾಸರಗೋಡು ತಾಲೂಕಿನ ಶ್ರೀ ಶಾರದಾಂಬ ಸಭಾಭವನದಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು, ಈ ಸಂದರ್ಭದಲ್ಲಿ ನಂಬರಿಗೆ ಕಾಸರಗೋಡು ಜನಜಾಗೃತಿ ಜಿಲ್ಲಾ ಅಧ್ಯಕ್ಷರಾದ ಅಶ್ವಥ್ ಪೂಜಾರಿ ಲಾಲ್ಬಾಗ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಅಶೋಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ 2 ಜಿಲ್ಲೆಯ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಕುಮಾರ್, ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀಯುತ ತಿಮ್ಮಯ್ಯ ನಾಯ್ಕ್ , ವ್ಯವಸ್ಥಾಪನ ಸಮಿತಿಯ ಸಮಿತಿಯ ಗೌರವಾಧ್ಯಕ್ಷರಾದ ಕಮಲಾಕ್ಷ ರವರು ತಾಲೂಕಿನ ಯೋಜನಾಧಿಕಾರಿಗಳಾದ ಮುಖೇಶ್ ರವರು , ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು, ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ಜರಗಿತು.
