ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಪ್ರಾದೇಶಿಕ ಭಾಗದ ದಕ್ಷಿಣ ಕನ್ನಡ 2 ಜಿಲ್ಲೆಯ ಮಂಜೇಶ್ವರ ತಾಲೂಕಿನ ತಲಪಾಡಿ ವಲಯದ ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಬಂಗ್ರ ಮಂಜೇಶ್ವರ ಸಭಾಭವನದಲ್ಲಿ 1766 ನೇ ಮದ್ಯ ವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಬಡಾಜಿ ಬೂಡು ಗೋಪಾಲ ಕೃಷ್ಣ ತಂತ್ರಿಗಳು ಉದ್ಘಾಟಿಸಿ ಶುಭ ಹಾರೈಸಿದರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಪರಮಪೂಜ್ಯರು ಆಶೀರ್ವಚನ ನೀಡಿದರು, ಡಾಕ್ಟರ್ ಜಯಪ್ರಕಾಶ್ ನಾರಾಯಣ ತೊಟ್ಟಿ ತೋಡಿ ಅಧ್ಯಕ್ಷರು ಜನಜಾಗೃತಿ ಕಾಸರಗೋಡು ಜಿಲ್ಲೆ, ಶ್ರೀ ಗೋಪಾಲ ಶೆಟ್ಟಿ ಅರಿಬೈಲು ಸ್ಥಾಪಕ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಕಾಸರಗೋಡು, ಶ್ರೀ ಅಶ್ವಥ್ ಪೂಜಾರಿ ಲಾಲ್ ಬಾಗ್ ಮಾಜಿ ಜಿಲ್ಲಾಧ್ಯಕ್ಷರು ಜನಜಾಗೃತಿ ವೇದಿಕೆ ಕಾಸರಗೋಡು, ಶ್ರೀ ಪ್ರವೀಣ್ ಕುಮಾರ್ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ದಕ್ಷಿಣ ಕನ್ನಡ 2, ಶ್ರೀ ಹರೀಶ್ ಶೆಟ್ಟಿ ಆರಂಭೋಡಿ ಅಧ್ಯಕ್ಷರು ವ್ಯವಸ್ಥಾಪಕ ಸಮಿತಿ, ಶ್ರೀಮತಿ ಶಶಿಕಲ ಸುವರ್ಣ ಯೋಜನಾಧಿಕಾರಿಗಳು, ಶ್ರೀ ಮುಖೇಶ್ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕರು ಭಾಸ್ಕರ್, ಎಲ್ಲಾ ಸೇವಾ ಪ್ರತಿನಿಧಿಗಳು, ಎಲ್ಲಾ ನವಜೀವನ ಸಮಿತಿಯ ಸದಸ್ಯರು, ಶೌರ್ಯ ತಂಡದ ಸದಸ್ಯರು, ಆರೋಗ್ಯ ಕಾರ್ಯಕರ್ತರು ಶ್ರೀಮತಿ ನೇತ್ರಾವತಿ ಉಪಸ್ಥಿತರಿದ್ದು ಕಾರ್ಯಕ್ರಮ ನಡೆಯಿತು.
