ದಾವಣಗೆರೆ ತಾಲೂಕಿನ ಶಾಂತಿನಗರ ವಲಯದ ವಿನೋಬನಗರ ಕಾರ್ಯಕ್ಷೇತ್ರದ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದಂತಹ ಶ್ರೀ ಗೌಡ್ರು ಚೆನ್ನಬಸಪ್ಪ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಸತೀಶ್ ಕಲ್ಲಾಳ್ ರವರು(ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಲಹೆಗಾರರು) ಕರಪತ್ರ ಹಾಗೂ ಛಾಯ ಚಿತ್ರಗಳನ್ನು ತೋರಿಸುವ ಮೂಲಕ ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಹೇಗೆ ದುಷ್ಪರಿಣಾಮಗಳು ಬೀಳುತ್ತವೆ ಮತ್ತು ಅದರಿಂದ ಯಾವೆಲ್ಲ ಕಾಯಿಲೆಗಳು ಮನುಷ್ಯನನ್ನು ಆವರಿಸಿಕೊಳ್ಳುತ್ತವೆ ಎನ್ನುವ ಬಗ್ಗೆ ಬಹಳ ಉತ್ತಮವಾದ ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲೆಯ ಗೌರವಾನ್ವಿತ ನಿರ್ದೇಶಕರು ಲಕ್ಷ್ಮಣ್ ಎಮ್., ಶಾಲೆಯ ಮುಖ್ಯ ಶಿಕ್ಷಕರಾದ ಮಹೇಶ್ವರಪ್ಪ ರವರು, ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಅಣಬೇರ ಮಂಜಣ್ಣ, ವಿನೋಬನಗರದ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಕುಂತಲ, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಪ್ರಗತಿ ಬಂದು ಸ್ವಸಹಾಯ ತಂಡದ 200 ಸದಸ್ಯರು ಉಪಸ್ಥಿತರಿದ್ದರು.
