ಧಾರವಾಡ ಪ್ರಾದೇಶಿಕ ವಿಭಾಗದ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆಯನ್ನು ಧಾರವಾಡ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ತೀರ್ಥಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಮಾರುತೇಶ್, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಜೈನ್, ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಪೂಜಾರಿ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಚರ್ಚಾ ವೇದಿಕೆ ಸಭೆಯಲ್ಲಿ ಮದ್ಯವರ್ಜನ ಶಿಬಿರದ ಅನುಷ್ಠಾನ, ಅಕ್ಟೋಬರ್.2ಕಾರ್ಯಕ್ರಮ, ಪಾನಮುಕ್ತ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ, ಸಾಮಾಜಿಕ ಅರಣ್ಯೀಕರಣ, ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ, ನವಜೀವನ ಪೋಷಕರ ತರಬೇತಿ,ಫೋನ್ ಕಾನ್ಫರೆನ್ಸ್ ಮೀಟಿಂಗ್ ಇತ್ಯಾದಿ ವಿಷಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜನಜಾಗೃತಿ ಯೋಜನಾಧಿಕಾರಿ, ಚಿತ್ರದುರ್ಗ ಜಿಲ್ಲೆಯ ಯೋಜನಾಧಿಕಾರಿಗಳು, ಚಿತ್ರದುರ್ಗ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
