ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ನಂಜನಗೂಡು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಮೈಸೂರು, ಜನಜಾಗೃತಿ ವೇದಿಕೆ ನಂಜನಗೂಡು, ನವಜೀವನ ಸಮಿತಿಗಳು ನಂಜನಗೂಡು ತಾಲೂಕು ಇವರಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಂಜನಗೂಡು ತಾಲೂಕಿನ ಯೋಜನಾ ಕಛೇರಿಯಲ್ಲಿ ತಾಲೂಕು ಮಟ್ಟದ ಪಾನಮುಕ್ತ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಶ್ರೀ ಗಂಗಾಧರ್ ರವರು ನವಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರಾದ ಶಶಿಕಲ, ಲತಾ, ಶ್ರೀ ಶಿವಯ್ಯ ರವರು ಉಪಸ್ಥಿತರಿದ್ದು ನವಜೀವನ ಸದಸ್ಯರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ಮಣಿಕಂಠ ಮತ್ತು ಶ್ರೀ ಲಕ್ಷ್ಮಣ್ ಶೆಟ್ಟಿ ರವರು ತಮ್ಮ ಪಾನಮುಕ್ತ ಜೀವನದ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ತಾಲೂಕಿನ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಸೋಮಶೇಖರ್, ಶ್ರೀ ಶಿವಯ್ಯ, ಶಶಿಕಲಾ, ಶ್ರೀ ಮಂಜೇಶ್, ಲತಾ, ಶ್ರೀ ಮೋಹನ್, ಊರಿನ ಗಣ್ಯರು, ವಲಯ ಮೇಲ್ವಿಚಾರಕರು, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ಮೇಲ್ವಿಚಾರಕರಾದ ಶ್ರೀ ವಸಂತ್ ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ನಂಜನಗೂಡು ತಾಲೂಕಿನ ನವಜೀವನ ಪೋಷಕರು, ತಾಲೂಕಿನ ಎಲ್ಲಾ ನವಜೀವನ ಸಮಿತಿ ಸದಸ್ಯರುಗಳು ಹಾಗೂ ಕುಟುಂಬದ ಸದಸ್ಯರು ಕಾರ್ಯಕ್ರಮವನ್ನು ಸಂಘಟಿಸಿ ಯಶಸ್ವಿಗೆ ಸಹಕರಿಸಿದರು.
