ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ವಲಯದಲ್ಲಿ ನವಜೀವನ ಸಮಾವೇಶ ಕಾರ್ಯಕ್ರಮವನ್ನು, ಹಾಗೂ 1516ನೇ ಮದ್ಯವರ್ಜನ ಶಿಬಿರದ ನೂತನ ನವಜೀವನ ಸಮಿತಿ ಸದಸ್ಯರ ಮಾಸಿಕ ಸಭೆ,ನವಜೀವನ ಸಮಿತಿಯ ಸದಸ್ಯರು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ,1516 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುನಾಥ್ HM, ಗ್ರಾಮ ಪಂಚಾಯಿತಿ ಸದಸ್ಯರಾದ ಕಿರಣ್ ಹಾಗೂ ಒಕ್ಕೂಟದ ಅಧ್ಯಕ್ಷರಾದ ವಾಸಪ್ಪ ಗೌಡ್ರು , ನವಜೀವನ ಸಮಿತಿಯ ಸದಸ್ಯರು ಹಾಗೂ ಈ ದಿನದ ವಿಶೇಷ ಮಾಹಿತಿಯನ್ನು ನವಜೀವನ ಸಮಿತಿ ಸದಸ್ಯರಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ತಿಮ್ಮಯ್ಯ ನಾಯಕ್ ಸರ್, ನೀಡಿರುತ್ತಾರೆ, ಹಾಗೂ ಈ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಹೇಮಲತಾ ಮೇಡಂ ಉಪಸ್ಥಿತರಿದ್ದು ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿರುತ್ತಾರೆ ಬಳಿಕ ಮೇಳಿಗೆ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಹಾಗೂ ಮೇಳಿಗೆ ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್ ರವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುತ್ತದೆ.
