ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಂಗಳೂರು ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ರುಡ್ ಸೆಟ್ ಸಂಸ್ಥೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ನವಜೀವನ ಸಮಿತಿ ಸದಸ್ಯರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಾದ್ಯಕ್ಷರು ಗೌರವಾನ್ವಿತ ಟ್ರಸ್ಟಿಗಳಾದ ಶ್ರೀಯುತ ವಿ.ರಾಮಸ್ವಾಮಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೀಪನಗೊಳಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಉದ್ಘಾಟಕರ ನುಡಿಗಳನ್ನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಾದ್ಯಕ್ಷರು ಗೌರವಾನ್ವಿತ ಟ್ರಸ್ಟಿಗಳಾದ ಶ್ರೀಯುತ ವಿ.ರಾಮಸ್ವಾಮಿ ತಮ್ಮ ಬದುಕು ರೂಪಿಸಿಕೊಳ್ಳಲು ರೂಡ್ ಸೆಟ್ ಸಂಸ್ಥೆಯಲ್ಲಿ ಪಡೆದ ತರಬೇತಿಯು ಅನುಕೂಲವಾದಂತಹ ಮಾಹಿತಿಯನ್ನು ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಸ್ವ ಉದ್ಯೋಗ ತರಬೇತಿಯ ಅನುಕೂಲಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಯುತ ತಿಮ್ಮಯ್ಯ ನಾಯ್ಕ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಕುರಿತು ಮಾಹಿತಿಯನ್ನು ನೀಡುವ ಮೂಲಕ ಶುಭ ಹಾರೈಸಿದರು.
