ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಇದರ ಸಹಾಯಯೋಗದೊಂದಿಗೆ ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಕಾರ್ಯಕ್ರಮವನ್ನು ಶ್ರೀ ಎ. ಸಿ. ಭಂಡಾರಿ, ಸ್ಥಾಪಕ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದಿಕ್ಸೂಚಿ ಮಾತುಗಳನ್ನಾಡಿದರು.
