ಬಂಟ್ವಾಳ ತಾಲೂಕಿನ ಪದಾಧಿಕಾರಿಗಳ ಸಭೆ

Janajagurthi Vedike News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಪದಾಧಿಕಾರಿಗಳ ಸಭೆಯನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಶ್ರೀ ಕೆಯ್ಯೂರು ನಾರಾಯಣ ಭಟ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ರೋನಾಲ್ಡ್ ಡಿ’ಸೋಜಾ, ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಚಿದಾನಂದ ರೈ ಕಕ್ಯ, ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಬಾಲಕ್ರಷ್ಣ ಎಮ್., ಶ್ರೀ ರಮೇಶ್ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.