ಕೊಪ್ಪಳ ಪ್ರಾದೇಶಿಕ ವಿಭಾಗದ ಬಳ್ಳಾರಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಬಳ್ಳಾರಿ ಯ ರೋಟರಿ ಕ್ಲಬ್ ನಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲಕ್ಕಿಮರದ ವಿರೂಪಾಕ್ಷಪ್ಪರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.2025/26.. ಸಾಲಿನ ಕ್ರಿಯಾ ಯೋಜನೆಯ ಅನುಷ್ಠಾನದ ಚರ್ಚೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ,ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ,ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಅನುಷ್ಠಾನ ಮಧ್ಯ ವರ್ಜನ ಶಿಬಿರದ ಬಗ್ಗೆ ಜಿಲ್ಲಾ ವೇದಿಕೆಯ ಖರ್ಚು ವೆಚ್ಚದ ಲೆಕ್ಕಾಚಾರದ ಮಂಡನೆ ಗಾಂಧಿ ಜಯಂತಿ ಕಾರ್ಯಕ್ರಮ,ವಲಯವಾರು ನವ ಜೀವನ ಸಮಿತಿ ರಚನೆ,ನವ ಜೀವನ ಪೋಷಕರ ತರಬೇತಿ,ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಕ್ರಮ 2025/2026ನೇ ಸಾಲಿನ ಕ್ರಿಯಾ ಯೋಜನೆಯಂತೆ ಇತರ ವಿಷಯಗಳನ್ನು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀ ಭಾಸ್ಕರ್, ನಿರ್ದೇಶಕರಾದ ರೋಹಿತಾಕ್ಷ, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಜನಾರ್ದನ್ ರೆಡ್ಡಿ, ಶ್ರೀ ಶಿವಶಂಕರ್ ರೆಡ್ಡಿ, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಕ್ಷೇತ್ರ ಯೋಜನಾಧಿಕಾರಿಗಳು ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
