ಬಸವಪಟ್ಟಣ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವಪಟ್ಟಣ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವಮಾದಕ ವಸ್ತು ವಿರೋಧಿ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀಯುತ ಚೇತನ್ ಕುಮಾರ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿ ಯಾಗಿ ಯಶಸ್ವಿನಿ (ಕನ್ನಡ ಉಪನ್ಯಾಸಕರು)ಅರಕಲಗೂಡು, ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ಮಾಹಿತಿ ನೀಡಿದರು. ಕಾರ್ಯಕ್ರದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀ ಜಿನ್ನಪ್ಪ ಎಸ್. ಪಿ. ರವರು ಮಕ್ಕಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಡಿಸಿ ಸದಸ್ಯರಾದ ಕುಮಾರ್, ಕುಸುಮ,ಮಹೇಶ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲತಾ, ಬಸವಪಟ್ಟಣ ವಲಯದ ಮೇಲ್ವಿಚಾರಕರಾದ ರಾಧಾ ಹಾಗೂ ಸೇವಾಪ್ರತಿನಿಧಿ ಪುಷ್ಪಲತಾ ಉಪಸ್ಥಿತರಿದ್ದರು.