ಬಾಣವರ ತಾಲೂಕಿನ ಬಾಣಾವರ ದಲ್ಲಿ 1536 ನೇ ಮದ್ಯ ವರ್ಜನ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಾಣಾವರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಾಣಾವರ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬಾಣಾವರ ತಾಲೂಕಿನ ಶ್ರೀ ಕಾಳಿಕಾಂಬ ಸಮುದಾಯ ಭವನದಲ್ಲಿ 1536ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಭಾಗ್ಯಮ್ಮ ನಂಜುಂಡ ಶೆಟ್ಟಿ ಅಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ವಹಿಸಿರುತ್ತಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶ್ರೀನಿವಾಸ್ ಗೌರವಾಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಾಣಾವರ, ಶ್ರೀಮತಿ ಮಮತಾ ಹರೀಶ್ ರಾವ್ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಹಾಸನ, ಶ್ರೀ ಅಣ್ಣಪ್ಪ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ, ಶ್ರೀ ಬಿಳಿಚೌಡಯ್ಯ ಸದಸ್ಯರು ಜಿಲ್ಲಾ ಪಂಚಾಯಿತಿ ಹಾಸನ, ಶ್ರೀ ಆನಂದ ಎಂ.ಎಸ್ ಪಿ.ಎಸ್.ಐ ಬಾಣಾವರ, ಶ್ರೀ ಗಣೇಶ್ ಮೂರ್ತಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಅರಸೀಕೆರೆ, ಶ್ರೀ ಜಯಂತ್ ಕೆ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಾಣಾವರ ತಾಲೂಕು, ಶ್ರೀಮತಿ ತಾರಾಮಣಿ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಣಾವರ ವಲಯ, ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಜಯಲಕ್ಷ್ಮಿ ಆರೋಗ್ಯ ಸಹಾಯಕಿ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಯೋಜನೆಯ ಮೇಲ್ವಿಚಾರಕರು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಭಾಗವಹಿಸಿರುತ್ತಾರೆ.