ಬಾದಾಮಿ ತಾಲೂಕಿನಲ್ಲಿ 1530 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಾದಾಮಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, 1530ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 1530ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಷ.ಬ್ರ ಶಿವಪೂಜಾ ಶಿವಾಚಾರ್ಯ ಮಹಾಸ್ವಾಮಿಗಳು ನವಗ್ರಹ ಹಿರೇಮಠ, ಬಾದಾಮಿ ಇವರು ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ವಿಠ್ಠಲ ಸಾಲಿಯಾನ್ ನಿರ್ದೇಶಕರು, ಶ್ರೀ ಭೀಮಸೇನ ಚಿಮ್ಮನಕಟ್ಟಿ, ಶ್ರೀ ಕೆ. ವಾಯ್ ಕಾಟನ್ನವರ, ಶ್ರೀ ಮಹೇಶ್ ಹೊಸಗೌಡ್ರು, ಶ್ರೀ ಮಂಜುನಾಥ ಹೊಸಮನಿ, ಶ್ರೀ ಡಾl. ಎಂ.ಜಿ ಕಿತ್ತಲಿ, ಯೋಜನಾಧಿಕಾರಿಗಳಾದ ಶ್ರೀ ಮಹಾಂತೇಶ್, ಶ್ರೀ ಮಾಧವ ನಾಯಕ್ ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.