ಬಿಡದಿ ವಲಯದ ತೊರೆದೊಡ್ಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಮನಗರ ತಾಲೂಕು ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಜಿಲ್ಲೆ ವತಿಯಿಂದ ಬಿಡದಿ ವಲಯದ ತೊರೆದೊಡ್ಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಿಕ್ಕಣ್ಣಯ್ಯ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಸತೀಶ್, ತಾಲೂಕು ಯೋಜನಾಧಿಕಾರಿ, ಮೇಲ್ವಿಚಾರಕರು, ಸೇವಾ ಪ್ರತಿನಿಧಿ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.