ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಶಾದಿ ಮಹಲ್ ಸಭಾಭವನದಲ್ಲಿ ನಡೆದ 1828 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ ಸ್ವಾಮೀಜಿಯವರು ಆಶೀರ್ವಚನ ಮಾಡಿದರು. ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಶಿವಪ್ಪ ಅವಟಿ, ಶಿಬಿರದ ಗೌರವಾಧ್ಯಕ್ಷರಾದ ನಿವೃತ್ತ ಉಪ ತಹಶೀಲ್ದಾರ್ ಎಂ. ಎಂ. ಜಮಖಂಡಿ, ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು, ಪದಾಧಿಕಾರಿಗಳು, ಜಿಲ್ಲೆಯ ನಿರ್ದೇಶಕರಾದ ಶ್ರೀ ಚನ್ನಕೇಶವ, ಜನಜಾಗೃತಿ ವೇದಿಕೆ ಸದಸ್ಯರು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಯೋಜನಾಧಿಕಾರಿಯವರಾದ ಶ್ರೀ ಸುಬ್ರಯ ಕೆ., ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ನಾಗೇಶ್ ವೈ. ಎ., ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಮತ್ತು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
