ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಯಲಹಂಕ ಯೋಜನಾ ಕಛೇರಿಯಲ್ಲಿ ನಡೆಯಿತು. ಈ ಸಭೆಗೆ ರಾಜ್ಯ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಟ್ರಸ್ಟಿ ಶ್ರೀ ರಾಮಸ್ವಾಮಿ ರವರು ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಶ್ರೀಮತಿ ವೀಣಾ ರಮೆಶ್ ಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಜಿಲ್ಲಾ ನಿರ್ದೇಶಕರು ಗತ ಸಭೆಯ ವರದಿಯನ್ನು ಓದಿ ಕ್ರಿಯಾಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಅನುದಾನದ ಬಳಕೆಯ ಕುರಿತು ಮಾಹಿತಿ ನೀಡಿದರು. ಮದ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಗಾಂಧೀ ಜಯಂತಿ ಕಾರ್ಯಕ್ರಮ, ನವಜೀವನ ಸಮಿತಿ ಬಲವರ್ಧನೆ, ಪೋಷಕರ ತರಬೇತಿ ಇನ್ನಿತರ ಕ್ರಿಯಾಯೋಜನೆಯ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾದ ಚರ್ಚೆ ಸಭೆಯಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯಲ್ಲಿ ತಾಲೂಕಿನಲ್ಲಿ ಕಡಿಮೆ ಸದಸ್ಯರು ಇರುವ ಕುರಿತು ಚರ್ಚಿಸಿ ಹೆಚ್ಚಿನ ಸದಸ್ಯರನ್ನು ಸೇರಿಸುವ ಕುರಿತು ನಿರ್ಣಯಿಸಲಾಯಿತು. ಹೊಸದಾಗಿ ಸೇರ್ಪಡೆಗೊಂಡ ಸದಸ್ಯರನ್ನು ಗೌರವಿಸಲಾಯಿತು. ಜಿಲ್ಲಾಮಟ್ಟದಲ್ಲಿ ಅಕ್ಟೋಬರ್ 2 ಗಾಂಧಿ ಜಯಂತಿಯ ಕಾರ್ಯಕ್ರಮವನ್ನು ಕೆ ಆರ್ ಪುರಂ ತಾಲೂಕಿನಲ್ಲಿ ನಡೆಸುದೆಂದು ತೀರ್ಮಾನಿಸಲಾಯಿತು. ಜನಜಾಗೃತಿ ಜಾಥ, ಪಾನಮುಕ್ತರ ಅಭಿನಂದನೆ ನಡೆಸುವ ಕುರಿತು ನಿರ್ಣಯಿಸಲಾಯಿತು. ಸಭೆಯಲ್ಲಿ ಜಿಲ್ಲಾ ವೇದಿಕೆ ಪದಾಧಿಕಾರಿಗಳು ಮತ್ತು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.