ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಕೋಲಾರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾಧ್ಯಕ್ಷರಾದ ಶ್ರೀ ವಾಸುದೇವ ಇವರು ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗತ ಸಭೆಯ ವರದಿವಾಚನದ ಬಳಿಕ ಅರ್ಧವಾರ್ಷಿಕ ಸಾಧನೆಯ ಕುರಿತು ಚರ್ಚೆ ನಡೆಸಲಾಯಿತು. ಮಧ್ಯವರ್ಜನ ಶಿಬಿರ, ನವಜೀವನ ಸಮಿತಿ ಅನುಷ್ಠಾನ ವಾರ್ಷಿಕೋತ್ಸವ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇನ್ನಿತರ ಕಾರ್ಯಕ್ರಮಗಳು ಕುರಿತು ಚರ್ಚಿಸಲಾಯಿತು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿರುವ ರಾಜ್ಯವೇದಿಕೆಯ ಮಹಾಸಭೆ ಮತ್ತು ಶತದಿನೋತ್ಸವ ಕಾರ್ಯಕ್ರಮದ ಕುರಿತು ವಿವರವಾದ ಚರ್ಚೆ ನಡೆಯಿತು. ಶ್ರೀ ಕ್ಷೇತ್ರಕ್ಕೆ ಪದಾಧಿಕಾರಿಗಳು ಬರುವ ಕುರಿತು ತಯಾರಿ ನಡೆಸಲಾಯಿತು ಮತ್ತು ಶತದಿನೋತ್ಸವಕ್ಕೆ ಬರುವ ನವಜೀವನ ಸಮಿತಿ ಸದಸ್ಯರ ವಿವರವನ್ನು ಪಡೆಯಲಾಯಿತು. ಈ ಸಂದರ್ಭದಲ್ಲಿ ಸೇರಿದೆಲ್ಲ ಪದಾಧಿಕಾರಿಗಳ ಸಮ್ಮುಖದಲ್ಲಿ ಪೂಜ್ಯರ ಹುಟ್ಟುಹಬ್ಬದ ಸಂಭ್ರಮವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ನಿರ್ದೇಶಕರು, ಯೋಜನಾಧಿಕಾರಿಗಳು, ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
