ಬೆಂಗಳೂರು ಪ್ರಾದೇಶಿಕ ವಿಭಾಗದ ಆನೇಕಲ್ ತಾಲೂಕಿನ ಯೋಗಿ ನಾರಾಯಣ ಕಲ್ಯಾಣ ಮಂಟಪದಲ್ಲಿ ನಡೆದ 16೦9ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಆನೇಕಲ್ ತಾಲೂಕಿನ ಯೋಗಿ ನಾರಾಯಣ ಕಲ್ಯಾಣ ಮಂಟಪದಲ್ಲಿ ನಡೆದ 16೦9ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಆನೇಕಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಬಿ. ಶಿವಣ್ಣರವರು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಿ ನಾಗರಾಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜನಜಾತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಬಿಕೆ ನಾರಾಯಣಸ್ವಾಮಿ, ಜಿಲ್ಲಾ ನಿರ್ದೇಶಕರಾದ ಶ್ರೀ ಉಮಾರಬ್ಬರವರು, ಆನೇಕಲ್ ಪುರಸಭಾ ಅಧ್ಯಕ್ಷರು ಪದ್ಮನಾಭ ಎಂ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಜೆಪಿ ಜಯಲಕ್ಷ್ಮಿ, ಪುರಸಭೆಯ ಸದಸ್ಯರು ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ಸದಸ್ಯರಾದ ಡಾ. ಭಾರ್ಗವ್ ರವರು,ಬೆಂಗಳೂರು ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ತಾಲೂಕು ಯೋಜನಾಧಿಕಾರಿ ಪಾತಲಿಂಗಪ್ಪ ರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ವಿಪತ್ತು ಸ್ವಯಂಸೇವಕರು, ನವ ಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಶ್ರೀಮತಿ ನಿಜಗುಣಮ್ಮ ವಂದಿಸಿದರು. ಮೇಲ್ವಿಚಾರಕರಾದ ಅಜಿತ್ ರವರು ಕಾರ್ಯಕ್ರಮ ನಿರೂಪಿಸಿದರು.