ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು 2 ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶಿರಾ-1 ಯೋಜನಾ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಗಣ್ಯಮಾನ್ಯರನ್ನು ತುಮಕೂರು 2 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ. ರವರು ಸ್ವಾಗತಿಸಿದರು. ವೇದಿಕೆಯಲ್ಲಿ ಆಸೀನರಿದ್ದ ಗಣ್ಯರುಗಳು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಪುಷ್ಪವನ್ನು ನೀಡುವ ಮೂಲಕ ಸ್ವಾಗತವನ್ನು ಕೋರಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಶೀನಪ್ಪ ಎಂ. ರವರು ಪ್ರಾಸ್ತಾವಿಕವಾಗಿ ಮಾತನಾಡಿ ಡಿಸೆಂಬರ್ ತಿಂಗಳಲ್ಲಿ ಶಿರಾ ನಗರದಲ್ಲಿ ನಡೆದ ಪೂಜ್ಯರ ಕಾರ್ಯಕ್ರಮವನ್ನು ಬಹಳ ಯಶಸ್ವಿಯಾಗಿ ನಡೆಸಿದಂತಹ ಕೀರ್ತಿ ತುಮಕೂರು-2 ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಾಂಧೀಜಿಯವರು ಕಂಡಂತಹ ರಾಮ ರಾಜ್ಯದ ಕನಸನ್ನು ಜನಜಾಗೃತಿ ವೇದಿಕೆಯ ಮೂಲಕ ಪೂಜ್ಯರು ನನಸು ಮಾಡುತ್ತಿದ್ದಾರೆ. ಜನಜಾಗೃತಿ ವೇದಿಕೆಯ ಸದಸ್ಯರುಗಳು ಎಲ್ಲಾ ರಂಗಗಳಲ್ಲಿರುವವರು ಇದ್ದಾರೆ. ಸಮಾಜಕ್ಕೆ ಸಾಮಾಜಿಕ, ಆರ್ಥಿಕ, ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ಬಹುದೊಡ್ಡ ಕೊಡುಗೆ ಕೊಟ್ಟಂತಹ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ. ಪೂಜ್ಯರು ಯೋಜನೆಯ ಮೂಲಕ, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಸುಮಾರು 58 ಲಕ್ಷ ಮಂದಿ ಸ್ವಸಹಾಯ ಸಂಘದ ಮೂಲಕ ಆರ್ಥಿಕ ಸಬಲೀಕರಣದಲ್ಲಿ ಮುಂಚೂಣಿಯಲ್ಲಿದ್ದು ಸಮಾಜಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಪ್ರಮುಖವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಅನುಧಾನ, ಹೈನುಗಾರಿಕೆ ಅನುಧಾನ, ಶೈಕ್ಷಣಿಕ ಕ್ಷೇತ್ರಕ್ಕೆ ಅನುಧಾನ ಹೀಗೆ ಸ್ವಸಹಾಯ ಸಂಘಗಳ ಆರ್ಥಿಕ ಯೋಜನೆ ಅಲ್ಲದೆ ಸಮಾಜಕ್ಕೆ ತನ್ನದೆ ಆದಂತಹ ಕೊಡುಗೆಗಳನ್ನು ಪೂಜ್ಯರು ನೀಡುತ್ತಿದ್ದಾರೆಂದು ತಿಳಿಸಿದರು. ತುಮಕೂರು -2 ಜಿಲ್ಲಾ ಜನಜಾಗೃತಿ ವೇದಿಕೆಯ ಸಹಭಾಗಿತ್ವದಲ್ಲಿ ತಾಲೂಕಿನ ಸಮಸ್ಯೆಗಳನ್ನು ಗಮನಕ್ಕೆ ತಂದಲ್ಲಿ ಜ್ಞಾನವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಅನುಷ್ಠಾನ ಮಾಡಬಹುದು. ಸಮಸ್ಯೆಗಳ ಬಗ್ಗೆ ನಾಟಕ ರೂಪಕದಲ್ಲಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುವುದೆಂದು ತಿಳಿಸಿದರು. ತುಮಕೂರು -2 ಜಿಲ್ಲೆಯ ಶಿರಾ, ಮಧುಗಿರಿ ತಾಲ್ಲೂಕಿನಲ್ಲಿ ಪ್ರಗತಿ ಸಾಧನ ಸಮಾವೇಶವನ್ನು ಹಮ್ಮಿಕೊಂಡು ಪೂಜ್ಯರ ಆಶೀರ್ವಾದ ಮಾರ್ಗದರ್ಶನದಿಂದ ಎಲ್ಲರಿಗೂ ಪ್ರೇರಣೆ ಸಿಕ್ಕಿದೆ ಬಹಳ ಅದ್ಬುತ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು. ಪೂಜ್ಯರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಯಕ್ರಮ ಒಂದು ವಿಶಿಷ್ಟವಾದ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮದ ಪಲಶ್ರುತಿಯಿಂದ ಮಧ್ಯವರ್ಜನ ಶಿಬಿರಕ್ಕೆ ಸೇರಿ ಸುಮಾರು ಒಂದು ಲಕ್ಷದ ಐವತ್ತು ಸಾವಿರ ಮಂದಿ ನೆಮ್ಮದಿಯ ಜೀವನವನ್ನು ನಡೆಸುತ್ತ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ತಿಳಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣವಾಗಿ ತಿಳಿಸುವ ಮೂಲಕ ಪೂಜ್ಯರ ಆದರ್ಶ ವ್ಯಕ್ತಿತ್ವ ನಮಗೆ ಮಾರ್ಗದರ್ಶನವಾಗಿದೆ ಎಂದು ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು. ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ರವರು ತುಮಕೂರು -2 ಜಿಲ್ಲಾ ವ್ಯಾಪ್ತಿಯ ಕ್ರಿಯಾಯೋಜನೆಗಳ ಕುರಿತು ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.