ಬೆಂಗಳೂರು ಪ್ರಾದೇಶಿಕ ವಿಭಾಗದ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 1503ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಸಮಾಜಸೇವಕರು, ಪರಿಸರ ಪ್ರೇಮಿಗಳಾದ ಬೆಳ್ಳೂಟಿ ಸಂತೋಷ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕಂಪನಿ ಸಿ ಎ. ದೇವರಾಜ್ ರವರು ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ನಿರ್ದೇಶಕರು ಪ್ರಶಾಂತ್ ಸಿ ಎಸ್, ಜನಜಾಗೃತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರ್ವಹಣೆಯನ್ನು ತಾಲೂಕು ಯೋಜನಾಧಿಕಾರಿಗಳು ನೆರವೇರಿಸಿದರು. ಪ್ರಾಸ್ತಾವಿಕವಾಗಿ ಜನಜಾಗೃತಿ ಯೋಜನಾಧಿಕಾರಿಗಳು ಮಾತನಾಡಿದರು. ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಮೇಲ್ವಿಚಾರಕರು, ಜನಜಾಗೃತಿ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವಜೀವನ ಪೋಷಕರು, ನವಜೀವನ ಸಮಿತಿ ಸದಸ್ಯರು, ಶಿಬಿರಾರ್ಥಿಗಳು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.
