ಬೆಂಗಳೂರು ಪ್ರಾದೇಶಿಕ ವಿಭಾಗದ ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಜಿಲ್ಲಾ ಜನ ಜಾಗೃತಿ ವೇದಿಕೆ ಕೋಲಾರ ಜಿಲ್ಲೆಯ ಸಭೆ ಯನ್ನು ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಶೀನಪ್ಪ M ರವರು ಉದ್ಘಾಟಿಸಿದರು. ಈ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮುಳಬಾಗಿಲು ತಾಲೂಕಿನ ಶ್ರೀ ವಾಸುದೇವ ಮೂರ್ತಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.4 ವರ್ಷ ದಿಂದ ಜಿಲ್ಲಾ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮಣ್ ಗೌಡರ ಸೇವೆಯನ್ನು ಸಭೆಯಲ್ಲಿ ಸ್ಮರಿಸಲಾಯಿತು .ಈ ವೇಳೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 7 ತಾಲೂಕಿನಲ್ಲೂ ಅ.2 ರಂದು ಗಾಂಧಿಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮುರಳೀಧರ್ ಶೆಟ್ಟಿ ಸರ್,ಸಿ ಎಸ್ ಸಿ ನಿರ್ದೇಶಕರಾದ ಪದ್ಮಯ್ಯ ಸರ್,ಜಿಲ್ಲಾ ವ್ಯಾಪ್ತಿಯ ಯೋಜನಾಧಿಕಾರಿಗಳು, ಪ್ರಾದೇಶಿಕ ವಿಭಾಗದ ಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು , ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ್, 7 ತಾಲೂಕಿನ ಜನ ಜಾಗೃತಿ ವೇದಿಕೆಯ ಸದಸ್ಯರು ಪಾಲ್ಗೊಂಡಿದ್ದರು.
