ಧಾರವಾಡ ಪ್ರಾದೇಶಿಕ ವಿಭಾಗದ ಬೆಳಗಾವಿ ಜಿಲ್ಲೆಯ ಖಾಸಬಾಗ್ ತಾಲೂಕಿನ ಹಲಗದಲ್ಲಿ ಅಂತರ್ರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಮಾಹಿತಿ ಹಾಗೂ ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ ಸರ್, ಬೆಳಗಾವಿ ಜಿಲ್ಲಾ ಜನಜಾಗೃತಿ ನಿಕಟಪೂರ್ವವ ಅಧ್ಯಕ್ಷರಾದ ಚಾರುಕೀರ್ತಿ ಸೈಬಣ್ಣ ನವರು, ಬೆಳಗಾವಿ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಪ್ರದೀಪ್ ಸರ್ ಖಾಸಬಾಾಗ ಯೋಜನಾಧಿಕಾರಿ ಮಂಜುನಾಥ್ ಸರ್ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗೇಶ್ ವೈ.ಎ, ಕೃಷಿ ಅಧಿಕಾರಿ ಹಾಗೂ ಮೇಲ್ವಿಚಾರಕರು ಹಾಗೂ ನವಜೀವನ ಸಮಿತಿ ಸದಸ್ಯರುು ಉಪಸ್ಥಿತರಿದ್ದರು, ಕರಪತ್ರದ ಮೂಲಕ ಸಮಾಜಕ್ಕೆ ವಿಶೇಷ ಸಂದೇಶ ನೀಡಲಾಯಿತು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಗೆ ಆರೋಗ್ಯಯ ರಕ್ಷಾ ಕಾರ್ಡ್ ವಿತರಣೆ ಮಾಡಲಾಯಿತು.
