ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕಿತ್ತೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ, ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ಜಿಲ್ಲೆ-1 ಇವರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ 2023 ಹಮ್ಮಿಕೊಂಡಿದ್ದು ಕಿತ್ತೂರ ರಾಣಿ ಚೆನ್ನಮ್ಮನ ಸರ್ಕಲದಲ್ಲಿ ಮಾಜಿ ಶಾಸಕರಾದ ಶ್ರೀ ಮಹಾಂತೇಶ ದೊಡ್ಡಗೌಡರ ಇವರು ಜಾಥಾ ಕಾರ್ಯಕ್ರಮ ಉದ್ಘಾಟಿಸಿದರು, ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲದಿಂದ ವೀರಭದ್ರೇಶ್ವರ ಕಲ್ಯಾಣ ಮಂಟಪದವರಿಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಒಂದು ಸಾವಿರ ಜನ ಭಾಗವಹಿಸಿದ್ದರು.ಅನಂತರ ಸಭಾ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಬಾಬಾ ಸಾಹೇಬ್ ಪಾಟೀಲ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಬಡ ಕುಟುಂಬಗಳಿಗೆ ದಾರಿ ದೀಪವಾಗುವ ಮೂಲಕ ಅವರನ್ನು ಪ್ರೋತ್ಸಾಹಿಸಿ ಸಮಾಜದಲ್ಲಿ ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮಾತನಾಡಿದರು. ಶ್ರೀ ರಾಜಣ್ಣಾ ಮೂ ಕೊರವಿ ರಾಜ್ಯಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಇವರು ಕೇವಲ ಸಾರಾಯಿ ಮಾರಾಟದ ಅಂಗಡಿಗಳನ್ನು ಮುಚ್ಚುವುದರಿಂದ ಕುಡಿತ ಬಿಡಿಸಲು ಸಾಧ್ಯವಿಲ್ಲ. ಮನಸ್ಸು ಪರಿವರ್ತನೆ ಮಾಡುವುದರಿಂದ ಪಾನ ಮುಕ್ತರನ್ನಾಗಿ ಮಾಡಲು ಸಾಧ್ಯ ಎಂದು ಸಲಹೆ ಮಾಡಿದರು. ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ವಸಂತ್ ಸಾಲ್ಯಾನ್ ಎಮ್ ಇವರು ಕ್ಷೇತ್ರದ ಪರಿಚಯ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು ಸಂಜಯ ಸಿದ್ದನ್ನವರ ತಾಲೂಕು ಆರೋಗ್ಯ ಅಧಿಕಾರಿಗಳು ಬೈಲಹೊಂಗಲ ಇವರು ಮಾನಸಿಕ ಅಸ್ವಸ್ಥತೆ ಸಮಾಜಕ್ಕೆ ಮಾರಕ. ಅದು ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತದೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತದೆ ಆದ್ದರಿಂದ ಸಮಾಜದಲ್ಲಿ ಸಾಮರಸ್ಯ ಕಾಪಾಡುವ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದು ಹೇಳಿದರು.ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ಬೆಳಗಾವಿ ೦೧ ಜಿಲ್ಲೆ ಡಾ. ಜಗದೀಶ್ ಹಾರೂಗೊಪ್ಪ ಇವರು ಹೆಣ್ಣು ಮಕ್ಕಳು ಸ್ವಾವಲಂಬನೆ ಜೀವನ ನಡೆಸುವಲ್ಲಿ ಗ್ರಾಮಾಭಿವೃದ್ಧಿ ಯೋಜನೆಯು ಬಹಳಷ್ಟು ಕಾರ್ಯ ನಿರ್ವಹಿಸುತ್ತಿದೆ ಎಂದು ಮಾತನಾಡಿದರು. ದಿವ್ಯ ಸಾನಿಧ್ಯ ಶ್ರೀ ಮಡಿವಾಳರಾಜಯೋಗಿಂದ್ರ ಮಹಾಸ್ವಾಮಿಗಳು ಶ್ರೀ ರಾಜಗುರು ಸಂಸ್ಥಾನ ಕಲ್ಮಟ ಕಿತ್ತೂರು ಇವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರು ಪಾತ್ರ ಬಹಳ ದೊಡ್ಡದು ಅದಕ್ಕೆ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಸ ಶ್ಲಾಘನೀಯ ಎಂದು ಮಾತನಾಡಿದರು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶ್ರೀ ಬಸವರಾಜ ಸೊಪ್ಪಿಮಠ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ 1 ಇವರು ವಹಿಸಿದ್ದರು, ಕಾರ್ಯಕ್ರಮದಲ್ಲಿ ಬೆಳಗಾಂ 1 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್, ಬೆಳಗಾಂ 1 ಜಿಲ್ಲೆಯ ಯೋಜನಾಧಿಕಾರಿಗಳು,ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನವಜೀವನ ಸಮಿತಿ ಸದಸ್ಯರು, ಪದಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡದವರು, ಜಿಲ್ಲಾ ಕಛೇರಿಯ ಸಿಬ್ಬಂದಿ, ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು, ತಾಲೂಕಿನ ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
