ಬೆಳಗಾವಿ 2 ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆಯನ್ನ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಸೋಮಶೇಖರ ಮಗದುಮ್ ಹಾಗೂ ಅಧ್ಯಕ್ಷರಾದ ಶ್ರೀ ಸುಭಾಷ್ ಹನಸಿ ಅವರು ದೀಪ ಬೆಳಗಿಸಿ ಸಭೆಗೆ ಚಾಲನೆಯನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ನಿರ್ದೇಶಕರಾದ ಎಚ್ಆರ್ ಲವಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆಯ ಗೌರವಾದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್ ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಯೋಜನಾಧಿಕಾರಿಗಳು, ಜಿಲ್ಲಾ ಎಂಐ ಎಸ್ ಯೋಜನಾಧಿಕಾರಿ, ಜಿಲ್ಲಾ ಕಚೇರಿ ವ್ಯವಸ್ಥಾಪಕರು, ಜನಜಾಗೃತಿ ಮೇಲ್ವಿಚಾರಕರು ಉಪಸ್ಥಿತರಿದ್ದರು. ಸಭೆಯಲ್ಲಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಅಕ್ಟೋಬರ್ 2 ರ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ಆರೋಗ್ಯಕರ ಚರ್ಚೆ ನಡೆದು ತೀರ್ಮಾನಿಸಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಸುವ ತೀರ್ಮಾನ ಮಾಡಲಾಯಿತು ಹಾಗೂ ಜಿಲ್ಲಾ ವೇದಿಕೆಯ ಎಲ್ಲಾ ಪದಾಧಿಕಾರಿಗಳಿಗೆ ಐಡಿ ಕಾರ್ಡ್ ಗಳನ್ನು ವಿತರಿಸಲಾಯಿತು. ವೇದಿಕೆಗೆ ಹೆಚ್ಚುವರಿ ಸದಸ್ಯರನ್ನಾಗಿ ಸವದತ್ತಿ ತಾಲ್ಲೂಕಿನ ಶ್ರೀ ಈಶ್ವರ ಕರಿಕಟ್ಟಿ ಇವರನ್ನು ಸರ್ವಾನುಮತದಿಂದ ಸೇರ್ಪಡೆಮಾಡಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸವದತ್ತಿ ತಾಲ್ಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಆಶಾಮಹೇಶ ನಿರೂಪಿಸಿದರು. ಯರಗಟ್ಟಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಸತೀಶ್ ಡಿ ಇವರು ಸ್ವಾಗತಿಸಿ, ವಂದಿಸಿದರು.
